ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನುಡಿದಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ನಂತರ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಹಾಗೆಂದು ಎಎಪಿ ಪಕ್ಷ ಹಾಗೂ ಕಮ್ಯುನಿಷ್ಟ್ ಪಕ್ಷದವರೇ ಹೇಳುತ್ತಿದ್ದಾರೆ. ಈ ಎರಡೂ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮತಗಟ್ಟೆ ಮಟ್ಟದಲ್ಲಿ ವ್ಯಾಪಕ ಪ್ರಚಾರ ಮಾಡಬೇಕು ಎಂದರು.
ಅಮಿಶ್ ಶಾ ಅವರೇ ನಿಮ್ಮಲ್ಲಿರುವಷ್ಟು ಭಿನ್ನಾಭಿಪ್ರಾಯ, ಕಿತ್ತಾಟ ನಮ್ಮಲ್ಲಿಲ್ಲ. ಅಧಿಕಾರಕ್ಕಾಗಿ ಶಿವಕುಮಾರ್ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಆದರೆ, ನಾನು ಮತ್ತು ಸಿದ್ದರಾಮಯ್ಯ ಒಗ್ಗಟ್ಟಾಗಿದ್ದೇವೆ. ಇಡೀ ಸಚಿವ ಸಂಪುಟ ಒಗ್ಗಟ್ಟಾಗಿದೆ. ಸರ್ಕಾರವನ್ನು ಯಶಸ್ವಿಯಗಿ ಮುನ್ನಡೆಸುತ್ತಿದ್ದೇವೆ. ಅಧಿಕಾರಕ್ಕೆ ನಾನು ಕಾದಿರುವೆ ಎಂಬುದು ನಿಮ್ಮ ಭ್ರಮೆ ಎಂದು ತಿರುಗೇಟು ನೀಡಿದರು.
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…
ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…
ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…