ಮೈಸೂರು

ಚಾ.ಬೆಟ್ಟ | ವಿಶೇಷ ದರ್ಶನಕ್ಕೆ ರೂ.2000 ದರ ನಿಗದಿ ; ಬಿಜೆಪಿ ಕಿಡಿ

ಬೆಂಗಳೂರು : ಚಾಮುಂಡಿ ಬೆಟ್ಟದಲ್ಲಿ ಜೂನ್ 27 ರಿಂದ ತಿಂಗಳ ಕಾಲ ಆಷಾಢ ಶುಕ್ರವಾರ ಆಚರಣೆ ನಡೆಯಲಿದ್ದು, ಇದದ ನಡುವೆ ವಿಶೇಷ ದರ್ಶನಕ್ಕೆ 2,000 ರೂ. ಟಿಕೆಟ್ ಪರಿಚಯಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಅತಿಯಾದ ಶುಲ್ಕ ವಿಧಿಸುವ ಮೂಲಕ ಹಿಂದೂ ಭಕ್ತರನ್ನು ಶೋಷಿಸುತ್ತಿದ್ದಾರೆಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಅವರು ಆರೋಪಿಸಿದ್ದಾರೆ.

ಬಂಟ್ವಾಳದಲ್ಲಿ ಉರೂಸ್ ಆಚರಣೆಗೆ ರೂ.4 ಕೋಟಿ ಮೀಸಲಿಟ್ಟು, ಅಲ್ಪಸಂಖ್ಯಾತರನ್ನು ಓಲೈಸುವುದನ್ನು ಮುಂದುವರೆಸಿರುವ ಸರ್ಕಾರ, ಹಿಂದೂಗಳನ್ನು ಶೋಷಿಸುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಈ ಶುಲ್ಕದ ಮೂಲಕ ಹಣ ಸಂಗ್ರಹಿಸಲು ಯತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ. ದಸರಾ ಆಚರಣೆಗೆ ರೂ.41.7 ಕೋಟಿ ಖರ್ಚು ಮಾಡಿರುವುದಾಗಿ ಸರ್ಕಾರ ಹೇಳಿದೆ. ಈ ಬಗ್ಗೆ ವಿವರ ಬಿಡುಗಡೆ ಮಾಡಲು ಜಿಲ್ಲಾಳಿತ ಮಂಡಳಿ 10 ತಿಂಗಳು ಸಮಯ ತೆಗೆದುಕೊಂಡಿದೆ. ಈ ಬಗ್ಗೆ ಚರ್ಚೆ ನಡೆಸಬೇಕು ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಸಾಮಾಜಿಕ-ಆರ್ಥಿಕ ಮರು ಸಮೀಕ್ಷೆಯನ್ನು ಘೋಷಿಸುವ ಮೂಲಕ ಹಿಂದುಳಿದ ಸಮುದಾಯಗಳಿಗೆ ದ್ರೋಹ ಮಾಡಿದ್ದಾರೆ. ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಜನರಿಗೆ ಪದೇ ಪದೇ ವಂಚಿಸಿದ್ದಾರೆ. ಹಿಂದೆ ಸಮೀಕ್ಷೆಗೆ ಖರ್ಚು ಮಾಡಿದ 165 ಕೋಟಿ ರೂಪಾಯಿ ಸಾರ್ವಜನಿಕ ಹಣ ವ್ಯರ್ಥವಾಗಿದ್ದು, ಅದನ್ನು ಸಿದ್ದರಾಮಯ್ಯ ಅವರು ಮರುಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರವು ಜನಗಣತಿ ಅಧಿಕಾರವನ್ನು ಹೊಂದಿರುವುದರಿಂದ, ಜಾತಿ ಜನಗಣತಿ ನಡೆಸುವ ಅಧಿಕಾರ ರಾಜ್ಯಕ್ಕೆ ಇಲ್ಲ. ಸಿದ್ದರಾಮಯ್ಯ ಅವರು ತೊಂದರೆಯಲ್ಲಿ ಸಿಲುಕಿದಾಗಲೆಲ್ಲಾ ಹಿಂದುಳಿದ ವರ್ಗಗಳು ಅಥವಾ ಜಾತಿ ಜನಗಣತಿಗೆ ಸಂಬಂಧಿಸಿದ ವಿಷಯಗಳನ್ನು ಎತ್ತುತ್ತಿದ್ದಾರೆಂದೂ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…

2 hours ago

ದೇವರಾಜ ಅರಸು ಸೇತುವೆ ಮೇಲೆ ಸಂಚಾರ ನಿರ್ಬಂಧ

ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…

2 hours ago

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ  ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…

2 hours ago

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…

2 hours ago

ತಗ್ಗದ ಗ್ಯಾಸ್ ಟ್ರಬಲ್; ಕೈಸುಡುತ್ತಿದೆ ತಿಂಡಿ ಬಿಲ್!

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…

2 hours ago