ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ. ಮೂರು ದಿನದ ಕಾರ್ಯಕ್ರಮದಲ್ಲಿ 42000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದ 28,000 ಹಳ್ಳಿಗಳು, 19000 ನಗರ ಬೂತ್ ಗಳಲ್ಲಿ 42000 ಕಾರ್ಯಕರ್ತರು ಮೂರು ದಿನ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುವರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನ ಕೈಗೊಳ್ಳಲಾಗಿದೆ.
ಅಭಿಯಾನದ ಮೂಲಕ ಪ್ರತಿ ಗ್ರಾಮ ಮನೆಗೆ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಲಿದ್ದಾರೆ ಎಂದರು.
ಈ ಅಭಿಯಾನ ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಬೇಕೆಂಬ ಆಶಯದೊಂದಿಗೆ ಗೋಡೆ ಬರಹ ಬರೆಯಲಾಗುವುದು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಅಭಿವೃದ್ಧಿ ಕಾರ್ಯಕ್ರಮಗಳ ತಲುಪಿಸುವ ನಿಟ್ಟಿನಲ್ಲಿ ಅಭಿಯಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…