Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಬಿಜೆಪಿಗೆ ನೈತಿಕ ಹಕ್ಕಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತನಿಖೆ ಆರಂಭವಾಗುತ್ತಿವೆ. ತನಿಖೆ ಕೈಗೊಂಡಿರುವ ಬಗ್ಗೆ ಮೊದಲು ಉತ್ತರಿಸಲಿ ಎಂದರು.

ಬಿಜೆಪಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ನಾವು ಮೊದಲೇ ಹೇಳಿದ್ದೆವು. ಅಧಿಕಾರಕ್ಕೆ ಬರುವ ಮುನ್ನವೇ ಅವರ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದೆವು. ಪಿ.ಎಸ್.ಐ ಹಗರಣವನ್ನು ನಿವೃತ್ತ ನ್ಯಾ. ಬಿ.ವೀರಪ್ಪ ಅವರು, 40% ಹಗರಣವನ್ನು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ತನಿಖೆ ಮಾಡಲಿದೆ, ಕೋವಿಡ್ ಕಾಲದ ಹಗರಣವನ್ನು ನಿವೃತ್ತ ನ್ಯಾ. ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ದ್ವೇಷ ಎಲ್ಲಿದೆ? ರಾಜ್ಯದ ಜನರ ಹಿತಾಸಕ್ತಿ ಇದರಲ್ಲಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೇ ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಿ ಎಂದು ನಾವು ಒತ್ತಾಯ ಮಾಡಿದ್ದೆವು ಎಂದು ಮಾಧ್ಯಮದವರಿಗೆ ನೆನಪಿಸಿದರು.

ದ್ವೇಷದ ರಾಜಕಾರಣ ಮಾಡುತ್ತಿಲ್ಲ : ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಅವರು ಅಧಿಕಾರದಲ್ಲಿದ್ದಾಗ 40 ಪರ್ಸೆಂಟ್ ಗೆ ಒತ್ತಾಯ ಮಾಡಿರಲಿಲ್ಲವೇ? ತನಿಖೆಗೆ ನಾವು ಆಗಲೇ ಒತ್ತಾಯ ಮಾಡಿದ್ದೆವು. ಅಧಿಕಾರಕ್ಕೆ ಬಂದ ನಂತರ ತನಿಖೆಗೆ ಕ್ರಮ ಕೈಗೊಂಡಿದ್ದೇವೆ. ಹಾಗಾದರೆ ಜನರ ದುಡ್ಡನ್ನು ತಿಂದುಕೊಂಡು ಹೋಗಿ ಎಂದು ಬಿಡಬೇಕಿತ್ತೆ ಎಂದು ಪ್ರಶ್ನಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ