ಮೈಸೂರು: ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ಳು ಹೇಳಿ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ: ಸಿಎಂ ಪ್ರಶ್ನೆ
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಏನ್ ಆರ್.ಅಶೋಕಾ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಲೇವಡಿ ಮಾಡಿದರು.
ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಲೇವಡಿ ಮಾಡಿದರು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…