ಮೈಸೂರು: ಬಿಜೆಪಿಯ ಅಕ್ರಮ ಮತ್ತು ಅಧಿಕಾರಿಶಾಹಿತ್ವ ವಿರುದ್ಧ ಮಾತನಾಡುವ ಎಲ್ಲರನ್ನು ಮುಗಿಸುವ ಹುನ್ನಾರ ಬಿಜೆಪಿಯಲ್ಲಿ ಅಡಗಿದೆ. ಎಲ್ಲಾ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚು ಬಿಜೆಪಿ ರೂಪಿಸಿದೆ. ಇದರ ಭಾಗವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಲು ಬಿಜೆಪಿ ಕಾಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಹೇಳಿದ್ದಾರೆ.
ನಗರದಲ್ಲಿಂದು (ಮಾ.೨೯) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಮಾತನಾಡಿದ ಹೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿಲಾಯಿತು. ಮುಂದೆ ಸಿಎಂ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಬಿಜೆಪಿ ಕಾಯುತ್ತಿದೆ. ಹಾಗಾಗಿ ಈ ಬಾರಿಯ ಮತದಾರರು ಯೋಚಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ಸಂಸದ ಪ್ರತಾಪ್ ಸಿಂಹ ಅವರು ನನ್ನನ್ನೂ ಜೈಲಿಗೆ ಹಾಕಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ಕಾರಣ ಕೇಳಿದರೇ ಹೇಳುವುದಿಲ್ಲ. ಇದು ಬಿಜೆಪಿಯ ಷಡ್ಯಂತರವಾಗಿದೆ. ಹೀಗಾಗಿ ಈ ಬಾರಿಯ ಚುನಾವಣೆಯನ್ನು ಮತದಾರರು ಗಂಭೀರವಾಗಿ ಪರಿಗಣಿಸಿ ಎಂದು ತಿಳಿಸಿದರು.
ನಾನೊಬ್ಬ ಜನ ಸಾಮಾನ್ಯರ ಕೈಗೆ ಸಿಗುವ ವ್ಯಕ್ತಿಯಾಗಿದ್ದೇನೆ. ನಾನು ಎಂದಿಗೂ ಜಾತಿ ಆಧಾರದ ಮೇಲೆ ರಾಜಕೀಯ ಮಾಡಿಲ್ಲ. ಸಿಎಂ ಅವರಿಗೆ ತಮ್ಮ ಕ್ಷೇತ್ರವನ್ನು ಗೆಲ್ಲಲಾಗಲಿಲ್ಲ ಎಂಬ ನೋವಿದೆ. ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದು, ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ಸಲ್ಲಿಸಿ ಎಂದು ಮನವಿ ಮಾಡಿದರು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…