ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ – ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.
ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ
ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಸುಳ್ಳು ಆರೋಪಗಳ ವಿರುದ್ಧ ಹೋರಾಟ
ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…