ಮೈಸೂರು

ಬಿಜೆಪಿ- ಜೆಡಿಎಸ್ ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ

ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ – ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್ ನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುಳ್ಳು ಆರೋಪಗಳ ವಿರುದ್ಧ ಹೋರಾಟ

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago