ಮೈಸೂರು

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ : ದಸರಾ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್‌

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಸ್ವೀಕರಿಸುತ್ತಾರೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. ಆದರೆ ಅವರು ನಂಬುತ್ತಾರೋ ಇಲ್ಲವೋ ಎಂಬುದು ಪ್ರಶ್ನೆಯಲ್ಲ. ಇದು ನಾಡಹಬ್ಬವಾಗಿದ್ದು, ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲರೂ ಸೇರಿಯೇ ಆಚರಿಸಬೇಕು ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ತಿರುಗೇಟು ನೀಡಿದೆ.

ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಬಾನು ಮುಷ್ತಾಕ್ ಅವರು ನಮ್ಮ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಒಪ್ಪಿಕೊಂಡು ಅವುಗಳಲ್ಲಿ ನಂಬಿಕೆ ಇಟ್ಟರೆ, ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು

ಬಾನು ಮುಷ್ತಾಕ್ ಮತ್ತು ಅನುವಾದಕಿ ಕೊಡಗಿನ ದೀಪಾ ಭಸ್ತಿ ಇಬ್ಬರೂ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಜೊತೆಗೆ ಕೊಡಗಿನ ದೀಪಾ ಭಸ್ತಿ ಅವರನ್ನು ಆಹ್ವಾನಿಸಬೇಕಿತ್ತು. ಸಿದ್ದರಾಮಯ್ಯ ಅವರಿಗೆ ಕೊಡಗಿನ ಬಗ್ಗೆ ಹೆಚ್ಚು ಆಸಕ್ತಿ ಇಲ್ಲವೇ? ಎಂದು ವಿಜಯೇಂದ್ರ ಪ್ರಶ್ನಿಸಿದರು.

ಒಬ್ಬ ಬರಹಗಾರ್ತಿಯಾಗಿ, ನಾವು ಅವರನ್ನು ಗೌರವಿಸುತ್ತೇವೆ. ಆದರೆ, ಅವರು ನಮ್ಮ ಸಂಪ್ರದಾಯ, ಆಚರಣೆಗಳು ಅಥವಾ ಧಾರ್ಮಿಕ ಭಾವನೆಗಳನ್ನು ಒಪ್ಪಿಕೊಂಡಿದ್ದರೆ, ಅದು ಬೇರೆಯದೇ ವಿಷಯವಾಗುತ್ತಿತ್ತು. ಈ ಹಿಂದೆ, ಲೇಖಕ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿದ್ದರು ಎಂದು ಅವರು ಹೇಳಿದರು.

ಇನ್ನೂ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ಸರ್ ಮಿರ್ಜಾ ಇಸ್ಲಾಮಿಯಲ್ ದಿವಾನರಾಗಿ ದಸರಾ ಮಾಡಿಲ್ಲವೇ? ಕವಿ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿಲ್ಲವೇ? ಇದಕ್ಕೆಲ್ಲಾ ಆಕ್ಷೇಪ ವ್ಯಕ್ತಪಡಿಸಬಾರದು. ನಾವು ನಾಡ ಹಬ್ಬವನ್ನು ಆಚರಿಸುವಾಗ ಧರ್ಮ ಅಥವಾ ಜಾತಿಯನ್ನು ನೋಡುವುದಿಲ್ಲ. ಅಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದರು.

ಇದು ನಾಡ ಹಬ್ಬ, ಈ ನೆಲದ ಹಬ್ಬ. ಇದನ್ನು ಬಹಳ ಸಮಯದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ನೀವು ಧಾರ್ಮಿಕ ವಿಷಯಗಳನ್ನು ಏಕೆ ಇದರಲ್ಲಿ ತರುತ್ತಿದ್ದೀರಿ? ಸಮಾಜದ ಒಂದು ವರ್ಗವನ್ನು ಹೊರಗೆ ಇಟ್ಟುಕೊಂಡು ನೀವು ಹಬ್ಬವನ್ನು ಆಚರಿಸುತ್ತೀರಾ? ಎಂದು ಪರಮೇಶ್ವರ ಅವರು ಬಿಜೆಪಿಯನ್ನು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

3 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

3 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

3 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

4 hours ago