ಮೈಸೂರು

ಪಕ್ಷ ನನಗೆ ತಾಯಿ ಇದ್ದಂತೆ, ಪಕ್ಷಕ್ಕೆ ನಾನೊಬ್ಬ ನಿಷ್ಠಾವಂತ ಸೇವಕ: ಪ್ರತಾಪ್‌ ಸಿಂಹ

ಮೈಸೂರು: ಮಹಾರಾಜರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲಿ ನನಗೆ ಹಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಒಂದೆರೆಡು ಪ್ರಶ್ನೆಗೆ ಕೇಳಿದ್ದೆ ವಿನಃ ಮಹಾರಾಜರ ವಿರುದ್ಧ ಮಾತನಾಡಲು ಅಲ್ಲ. ಈ ಬಗ್ಗೆ ಮಾಧ್ಯಮಗಳು ತಪ್ಪು ಮಾಹಿತಿ ನೀಡುವುದು ಬೇಡ ಎಂದು ಸಂಸದ ಪ್ರತಾಪ್‌ ಸಿಂಹ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ರಾಜ ಯದುವೀರ್‌ ಅವರಿಗೆ ಟಿಕೆಟ್‌ ಘೋಷಣೆಯಾದ ನಂತರ ನಾನು ಮಹಾರಾಜರಿಗೆ ಕರೆ ಮಾಡಿ ನಿಮ್ಮ ಎಲೆಕ್ಷನ್‌ ಏಜೆಂಟ್‌ ಆಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದೇನೆ. ನನಗೆ ಪಕ್ಷ ತಾಯಿ ಇದ್ದಂತೆ, ಪಕ್ಷಕ್ಕೆ ನಾನೊಬ್ಬ ಲಾಯಲ್‌ ಸೋಲ್ಜರ್‌. ನಾನು ಎಂದಿಗೂ ಪಕ್ಷಕ್ಕೂ ದ್ರೋಹ ಮಾಡುವುದಿಲ್ಲ, ಪಕ್ಕದವರಿಗೂ ದ್ರೋಹ ಮಾಡುವುದಿಲ್ಲ ಎಂದರು.

ಹೈಕಮಾಂಡ್‌ ತಮಗೆ ಯಾಕೆ ಟಿಕೆಟ್‌ ತಪ್ಪಿಸಿದರು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, 2014 ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂತಾ ಹೈಕಮಂಡ್ ಹೇಳಿರಲಿಲ್ಲ. ನಾನೊಬ್ಬ ಸೂಕ್ತ ಅಭ್ಯರ್ಥಿ ಎಂದು ಆಯ್ದಿರಿಸಿದ್ದರು. ನಾನು ಯಾಕೆ ಕೊಟ್ಟರಿ ಅಂತಾ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ಟಿಕೆಟ್ ತಪ್ಪಿಸಿದ್ದೀರಿ ಅಂತಾ ನಾನು ಕೇಳಿಯೂ ಇಲ್ಲ. ಅದನ್ನು ಒಪ್ಪಿಸುವ ಅನಿವಾರ್ಯತೆ ಪಕ್ಷಕ್ಕಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.

ಕಾಂಗ್ರೆಸ್ ಪಕ್ಷದಿಂದ ಆಫರ್ ಇತ್ತು ಇಲ್ವಾ ಎಂಬ ಯಾವ ಪ್ರಶ್ನೆಗಳು ಈಗ ಪ್ರಸ್ತುತ ಅಲ್ಲ. ನಮಗೆ ಯದುವೀರ್ ಅವರನ್ನು ಗೆಲ್ಲಿಸುವುದಷ್ಟೇ ಈಗ ಮುಖ್ಯ. ದೇಶಕ್ಕೆ ಮೋದಿ ಬೇಕು, ಮೋದಿ ಪರವಾಗಿ ಕೈ ಎತ್ತಲು ಮೈಸೂರಿನಿಂದ ಒಬ್ಬ ವ್ಯಕ್ತಿ ಬೇಕು ಇದಷ್ಟೇ ನಮಗೆ ಮುಖ್ಯ. ಕಾಂಗ್ರೆಸ್‌ನಿಂದ ನನಗೆ ಯಾವುದೇ ಆಫರ್‌ ಬಂದಿಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಇವರಿಗೆ ಜೊತೆಯಾಗಿ ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕ ಶ್ರೀವಸ್ತ, ಮಾಜಿ ಶಾಸಕರಾದ ಎಲ್‌. ನಾಗೇಂದ್ರ, ಎಸ್‌.ಎ ರಾಮದಾಸ್‌, ನಟಿ ಮಾಳವಿಕಾ ಇದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಒಂದು ವಾರ ಮಳೆ, ಕರಾವಳಿಯಲ್ಲಿ ಬಿಸಿ ಗಾಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…

11 mins ago

ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ

ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…

18 mins ago

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…

35 mins ago

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

1 hour ago

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

2 hours ago

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…

2 hours ago