ಮೈಸೂರು : ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ಜಾನಾಕ್ರೋಶ ಯಾತ್ರೆ ಕೈಗೊಂಡಿದೆ.
ಸೋಮವಾರ ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಯಾತ್ರೆ ಆರಂಭಗೊಳ್ಳಲಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೊಶಿ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಒಟ್ಟು ನಾಲ್ಕು ಹಂತದಲ್ಲಿ ಯಾತ್ರೆ ನಡೆಯಲಿದೆ.
ಸಂಜೆ 4:30 ಕ್ಕೆ ನಗರದ ಲಷ್ಕರ್ ಮೊಹಲ್ಲದಾ ಅಂಚೆ ಕಚೇರಿ ಬಳಿ ಯಾತ್ರೆ ಆರಂಭಗೊಳಲಿದೆ. ಅಶೋಕ ವೃತ್ತದಿಂದ ಸಾಗಿ ಗಾಂಧಿ ವೃತ್ತದವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಲಿದೆ.





