Mysore
21
broken clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಶ್ರೀವತ್ಸ

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.

ನಗರದ ವಿದ್ಯಾರಣ್ಯಪುರಂ ಸುತ್ತಮುತ್ತ ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ, ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪರ ಮತಾಯಾಚಿಸಿ ಅವರು ಮಾತನಾಡಿದರು.

ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಳು ಮತ್ತು ವಿಶ್ವಮಟ್ಟದಲ್ಲಿ ಭಾರತವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಕೈಗೊಂಡಿರುವ ರಾಜತಾಂತ್ರಿಕ ವಿಷುಯಗಳಿಂದ ವಿಶ್ವದ ಬಲಿಷ್ಠ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಪಡೆದಿದೆ.

ಅಲ್ಲದೆ, ಮೋದಿಯವರು ಜನಪರ ಹಾಗೂ ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಕೋಟ್ಯಂತರ ಜನರ ಆಶಯವಾಗಿದ್ದ ಅಯೋಧ್ಯೆಯ ರಾಮಮಂದಿರ ನಿರ್ವಾಣ ಸೇರಿದಂತೆ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.

ನಗರ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ, ನಗರ ಉಪಾಧ್ಯಕ್ಷ ಜೋಗಿ ಮಂಜು, ನಗರಪಾಲಿಕೆ ಮಾಜಿ ಸದಸ್ಯರಾದ ಪಾರ್ಥಸಾರಥಿ, ರಮೇಶ್, ಜಗದೀಶ್, ಕೆ.ಆರ್.ಕ್ಷೇತ್ರದ ಅಧ್ಯಕ್ಷ ಗೋಪಾಲ್‌ರಾಜ್ ಅರಸ್, ಜೆ.ರವಿ, ಪ್ರಧಾನ ಕಾರ್ಯದರ್ಶಿಗಳಾದ ಜುಯರಾಮ್, ಜಗದೀಶ್, ಸಂದೀಪ್, ಧರ್ಮೇಂದ್ರ, ಶಿವಲಿಂಗಸ್ವಾಮಿ ಹಾಗೂ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Tags:
error: Content is protected !!