ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.
ನಗರದ ವಿದ್ಯಾರಣ್ಯಪುರಂ ಸುತ್ತಮುತ್ತ ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ, ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪರ ಮತಾಯಾಚಿಸಿ ಅವರು ಮಾತನಾಡಿದರು.
ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಳು ಮತ್ತು ವಿಶ್ವಮಟ್ಟದಲ್ಲಿ ಭಾರತವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಕೈಗೊಂಡಿರುವ ರಾಜತಾಂತ್ರಿಕ ವಿಷುಯಗಳಿಂದ ವಿಶ್ವದ ಬಲಿಷ್ಠ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಪಡೆದಿದೆ.
ಅಲ್ಲದೆ, ಮೋದಿಯವರು ಜನಪರ ಹಾಗೂ ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆ ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ಕೋಟ್ಯಂತರ ಜನರ ಆಶಯವಾಗಿದ್ದ ಅಯೋಧ್ಯೆಯ ರಾಮಮಂದಿರ ನಿರ್ವಾಣ ಸೇರಿದಂತೆ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.
ನಗರ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ, ನಗರ ಉಪಾಧ್ಯಕ್ಷ ಜೋಗಿ ಮಂಜು, ನಗರಪಾಲಿಕೆ ಮಾಜಿ ಸದಸ್ಯರಾದ ಪಾರ್ಥಸಾರಥಿ, ರಮೇಶ್, ಜಗದೀಶ್, ಕೆ.ಆರ್.ಕ್ಷೇತ್ರದ ಅಧ್ಯಕ್ಷ ಗೋಪಾಲ್‌ರಾಜ್ ಅರಸ್, ಜೆ.ರವಿ, ಪ್ರಧಾನ ಕಾರ್ಯದರ್ಶಿಗಳಾದ ಜುಯರಾಮ್, ಜಗದೀಶ್, ಸಂದೀಪ್, ಧರ್ಮೇಂದ್ರ, ಶಿವಲಿಂಗಸ್ವಾಮಿ ಹಾಗೂ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಹಣಗಳಿಕೆಗಾಗಿ ಸುಳ್ಳು, ಮೋಸ, ಕೊಲೆ ಸುಲಿಗೆ ಪ್ರಕರಣಗಳೇ ಹೆಚ್ಚಾಗಿ ಕಂಡುಬರುತ್ತಿವೆ. ನಿಧಿಗಾಗಿ ವಾಮಾಚಾರ…
ಪ್ರಸ್ತುತ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಅಕಾಲಿಕ ತುಂತುರು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು,…
ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ…
ಪಂಜುಗಂಗೊಳ್ಳಿ ೭,೫೦೦ಕ್ಕೂ ಹೆಚ್ಚು ಮಕ್ಕಳ ಬದುಕಿಗೆ ಆಸರೆಯಾದ ಆನಂದ ಶಿಕ್ಷಾ ನಿಕೇತನ ಪಶ್ಚಿಮ ಬಂಗಾಳದ ಮುರ್ಷಿದಾಬಾದಿನ ಶಂಕರಪಾದ ಗ್ರಾಮದ ಒಂಬತ್ತು…
ನವೀನ್ ಡಿಸೋಜ ೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಮಕರ ಸಂಕ್ರಾಂತಿಯಂದು ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ನಡೆಯುವ ದೊಡ್ಡ ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು…