ಮೈಸೂರು

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ಪಶ್ಚಿಮಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆ ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ, ಎಲ್ಲರಿಗೂ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಕೇಂದ್ರ ನಾಯಕರ ಪರವಾಗಿ ಜೈಕಾರ ಕೂಗಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್. ಶ್ರಿವತ್ಸ, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮೂರು ಕಡೆ ಐತಿಹಾಸಿಕ ಗೆಲುವು ಸಾಽಸಿದೆ. ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಮಮತಾ ಬ್ಯಾನರ್ಜಿಯವರ 15 ವರ್ಷಗಳ ದುರಾಡಳಿತ ಅಂತ್ಯಗೊಂಡಿದೆ ಎಂದರು.

ಸಂವಿಧಾನ ವಿರೋಧಿಯಾಗಿ ನಡೆದುಕೊಂಡ ಮಮತಾ ಬ್ಯಾನರ್ಜಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ಜತೆಗೆ ಲಕ್ಷಾಂತರ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಅಸ್ಸಾಂ ಮತ್ತು ಪುದುಚೇರಿಯಲ್ಲೂ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದಂತೆ ಕರ್ನಾಟದಲ್ಲೂ ಕಾಂಗ್ರೆಸ್ ದುರಾಡಳಿತ ನಡೆಸುತ್ತಿದೆ. ಮುಂಬರುವ ಕರ್ನಾಟಕದ ಚುನಾವಣೆಯಲ್ಲೂ ಪಶ್ಚಿಮ ಬಂಗಾಳದ ಮಾದರಿಯಲ್ಲೇ ಫಲಿತಾಂಶ ಬರಲಿದೆ. ರಾಜ್ಯದಲ್ಲೂ ದುರಾಡಳಿತ ಮಿತಿಮೀರಿದೆ. ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಅನುಕಂಪ ಕೆಲಸ ಮಾಡಿದೆ. ಉಪ ಚುನಾವಣೆಯಲ್ಲಿ ಮತದಾರರು ಆಡಳಿತಾರೂಢ ಪಕ್ಷಕ್ಕೆ ಮತಹಾಕುವುದು ವಾಡಿಕೆ. ನಾವು ಅಧಿಕಾರದಲ್ಲಿದ್ದಾಗ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಅದು ಮರುಕಳಿಸಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಕಾಣಲಿದೆ ಎಂದು ಭವಿಷ್ಯ ನುಡಿದರು.

ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಮಾತನಾಡಿ, ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಅದರಲ್ಲೂ, ಪಶ್ಚಿಮ ಬಂಗಾಳವನ್ನು ಹಿಂಸಾಚಾರ, ಭಯದ ನಾಡಾನ್ನಾಗಿಸಿದ ಹಾಗೂ ಬಾಂಗ್ಲಾ ವಲಸಿಗರಿಗೆ ಗುರುತಿನ ಚೀಟಿ ಕೊಟ್ಟ ಮಮತಾ ಬ್ಯಾನರ್ಜಿ ಅವರ ರಾಜಕೀಯ ಬದುಕು ಅಂತ್ಯಗೊಂಡಿದೆ. ದೇಶದ ಭದ್ರತೆಗೆ ಪ್ರಧಾನಿ ನರೇಂದ್ರ ಮೋದಿಯೇ ಸೂಕ್ತ ಎಂದು ಜನರು ತೀರ್ಮಾನಿಸಿದ್ದಾರೆ ಎಂದರು.

ಒಟ್ಟಾರೆ ಕೇಂದ್ರ ಸರ್ಕಾರದ ಅಭಿವೃದ್ಧಿಪರ ದೃಷ್ಟಿಕೋನ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದಿಟ್ಟ ನಾಯಕತ್ವ, ಜನಪರ ಆಡಳಿತದ ಮೇಲೆ ದೇಶದ ಜನರು ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿ, ಆಶೀರ್ವದಿಸಿದ್ದಾರೆ. ಪ್ರಮುಖವಾಗಿ ಪಶ್ಚಿಮ ಬಂಗಾಳದ ಜನರು ಬಿಜೆಪಿ ಬೆಂಬಲಿಸುವ ಮೂಲಕ ಅಲ್ಲಿನ ದುರಾಡಳಿತಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದರು.

ಸಂಭ್ರಮಾಚರಣೆಯಲ್ಲಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕೆ.ಎನ್. ಸುಬ್ಬಣ್ಣ, ನಗರ ವಕ್ತಾರ ಎಂ.ಎ. ಮೋಹನ್, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ಕೇಬಲ್ ಮಹೇಶ್, ಮಿರ್ಲೆ ಶ್ರೀನಿವಾಸ ಗೌಡ, ಡಾ.ಇ.ಸಿ. ನಿಂಗರಾಜೇಗೌಡ, ಮಂಗಳಾ ಸೋಮಶೇಖರ್ ಸೇರಿದಂತೆ ಅನೇಕರು ಇದ್ದರು.

 

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

22 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

22 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

22 hours ago