ಮೈಸೂರು

ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಒತ್ತು ನಾರಿ ಶಕ್ತಿ ಕಾರ್ಯಕ್ರಮದಲ್ಲಿ: ರೇಣುಕ ರಾಜ್

ಮೈಸೂರು : ದೇಶದ ಅಖಂಡತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡುತ್ತದೆ. ಕಾಂಗ್ರೆಸ್‌ ಪಕ್ಷದಂತೆ ಪುಕ್ಕಟ್ಟೆ ಭಾಗ್ಯಗಳನ್ನು ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಹೋಗುವುದಿಲ್ಲ’ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಹೇಳಿದರು.
ನಗರದ ಕುವೆಂಪು ನಗರದಲ್ಲಿರುವ ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಂದಂತಮ್ಮ ಮತ್ತು ಶ್ರೀ ಕಾಳಮ್ಮ  ದೇವಸ್ಥಾನದಲ್ಲಿ ನಾರಿ ಶಕ್ತಿ ಎಂಬ ಕಾರ್ಯಕ್ರಮದಲ್ಲಿ ಶಕ್ತಿ ದೇವಿ ಪೂಜೆ ಮಾಡಿ ನಾವು ಶಕ್ತಿ ಆರಾಧಕರು, ಮತ್ತೊಮ್ಮೆ ದೇಶಕ್ಕೆ  ಪ್ರಧಾನಿ ನರೇಂದ್ರ ಮೋದಿ, ಹಲವಾರು ಘೋಷಣೆ ಕೂಗಿದರು ಬಳಿಕ  ಅವರು
ಮಾತನಾಡಿದರು.
ಬಿಜೆಪಿಯು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯರಿಗೂ ಸ್ಪರ್ಧಿಸುವ ಅವಕಾಶ ಕಲ್ಪಿಸಿದೆ. ಪಕ್ಷದ ಹುದ್ದೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಸುಳ್ಳು ಭರವಸೆಗಳಿಗೆ ಜನರು ಮಾರು ಹೋಗದಂತೆ ಜಾಗೃತಿ ಮೂಡಿಸಬೇಕಿದೆ.  ದೇಶದ ಸುಭದ್ರತೆ, ರಕ್ಷಣೆ ಮತ್ತು ಆರ್ಥಿಕ ಬೆಳವಣಿಗೆಗೆ ಬಿಜೆಪಿಗೆ ಮತ ನೀಡುವಂತೆ ಜನರನ್ನು ಮನವೊಲಿಸಬೇಕು ಎಂದು ಹೇಳಿದರು.
‘ಲೋಕಸಭಾ ಚುನಾವಾಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮೈಸೂರು ಕೊಡಗುಲೋಕಸಭಾ ಕ್ಷೇತ್ರಕ್ಕೆ ನಮ್ಮ ಯುವರಾಜರಾದ ಯದುವೀರ್ ಶ್ರೀ ಕೃಷ್ಣ ದತ್ತ ಒಡೆಯರು ಅವರಿಗೆ ಸ್ಪರ್ಧಿಸಲು ಅವಕಾಶ ದೊರತಿದ್ದು, ನಮೆಗಲ್ಲ ಸಂತಸವಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲುವಂತೆ ನಾವೆಲ್ಲರೂ ಶ್ರಮಿಸಬೇಕಿದೆ ಎಂದು ಹೇಳಿದರು.
ನರೇಂದ್ರ ಮೋದಿ ಅವರು ಮುದ್ರಾಯೋಜನೆ, ಜನಧನ ಯೋಜನೆ, ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ, ಸ್ವಚ್ಛ ಭಾರತ, ಉಜ್ವಲ ಯೋಜನೆ ಇನ್ನೂ ಹಲವಾರು ಯೋಜನೆಗಳ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ ಹಾಗೂ ಲೋಕಸಭೆ, ವಿಧಾನಸಭೆಗಳಲ್ಲಿ ಶೇ33ರಷ್ಟು ಮೀಸಲಾತಿ ನೀಡಿ, ಕಾನೂನು ರೂಪಿಸುವಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಉಪ ಮಹಾಪುರಾದ ಡಾಕ್ಟರ್ ರೂಪ , ಮಾಜಿನಗರ ಪಾಲಿಕೆ ಸದಸ್ಯರಾದ ಲಕ್ಷ್ಮಿ ಕಿರಣ್ ಗೌಡ, ನಗರ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಕಲಾ, ಮಮತಾ ಶೆಟ್ಟಿ, ಕ್ಷೇತ್ರದ ಅಧ್ಯಕ್ಷರುಗಳಾದ ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ಲಕ್ಷ್ಮಿ, ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷರಾದ ಸರ್ವ ಮಂಗಳ, ಚಾಮುಂಡೇಶ್ವರಿ ಗ್ರಾಮಾಂತರ ಮಮತಾ ಗೌಡ, ನರಸಿಂಹರಾಜ ಕ್ಷೇತ್ರದ ಮಾಲಿನಿ ಪಾಲಾಕ್ಷ, ಹಾಗೂ ನೂರಾರು ಬಿಜೆಪಿ ಮಹಿಳಾ ಕಾರ್ಯಕರ್ತರು ಹಾಜರಿದ್ದರು
andolanait

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago