ಮೈಸೂರು

ಬಿಜೆಪಿಗರನ್ನು ಚಡ್ಡಿಗಳು ಅಂತಿದ್ದೆವು : ಸಿಎಂ ಸಿದ್ದರಾಮಯ್ಯ

ಮೈಸೂರು : ಕಾವೇರಿ ಹೋರಾಟದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಬಿಜೆಪಿಗರನ್ನು ನಾವೆಲ್ಲಾ ಮೊದಲು ಚಡ್ಡಿಗಳು ಅಂತಿದ್ದೆವು. ಇದೀಗ ಚಡ್ಡಿ ಧರಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ ಅಷ್ಟೇ ಎಂದಿದ್ದಾರೆ.

ನಿನ್ನೆ ಮಂಡ್ಯದಲ್ಲಿ ಬಿಜೆಪಿ ನಾಯಕರಾದ ಬಿ.ವೈ ವಿಜಯೇಂದ್ರ, ಅಶ್ವತ್ಥ್ ನಾರಾಯಣ್ ಅವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಕಾವೇರಿ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೆರೆಸುತ್ತಾ ಇರೋದು ದುರದೃಷ್ಟಕರ. ಇದು ರಾಜಕಾರಣದ ದೃಷ್ಟಿಯಿಂದ ಅಷ್ಟೇ. ಜನರಿಗಾಗಿ, ರಾಜ್ಯದ ಹಿತದೃಷ್ಟಿಯಿಂದ ಮಾಡುತ್ತಿಲ್ಲ. ಬಿಜೆಪಿಯವರನ್ನ ಮೊದಲೆಲ್ಲಾ ಚಡ್ಡಿಗಳೆಂದು ಕರೆಯುತ್ತಾ ಇದ್ದೆವು. ರಾಜಕೀಯ ಲಾಭಕ್ಕಾಗಿ ಕಾವೇರಿ ವಿಚಾರವನ್ನ ರಾಜಕೀಯಗೊಳಿಸಲಾಗುತ್ತಿದೆ. ಪ್ರತಿಭಟನೆ ಮಾಡೋಕೆ ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಹೇಳಿಕೆಗೂ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಮ್ಮನ್ನು ಡಿಎಂಕೆಯ ಬಿ ಟೀಮ್ ಎಂದಿದ್ದಾರೆ. ಬಿಜೆಪಿ ಕೂಡ ಎಐಡಿಎಂಕೆ ಜೊತೆ ಇದ್ದರು. ರಾಜ್ಯದ ಹಿತಕ್ಕಾಗಿ ನಾವು ಎಂದೂ ಹಿಂದೆ ಬಿದ್ದಿಲ್ಲ. ನಮಗೆ ಅಧಿಕಾರ ಎಂದಿಗೂ ಮುಖ್ಯವಲ್ಲ. ರಾಜಕೀಯಕ್ಕಾಗಿ ಬಾಯಿಗೆ ಬಂದಂತೆ ಹೇಳಬಾರದು. ರಾಜ್ಯ ಸರ್ಕಾರಕ್ಕೆ ರೈತರ ಹಿತವೇ ಮುಖ್ಯ ಎಂದರು. ಕಾವೇರಿ ಹೋರಾಟಗಾರರ ಬಗ್ಗೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆ ವಿರುದ್ಧ ಸುಪ್ರೀಂಕೋರ್ಟ್‌ ಆದೇಶವಿದೆ. ಅದಕ್ಕಾಗಿ ಬೆಂಗಳೂರಲ್ಲಿ ರಾಜ್ಯ ಸರ್ಕಾರ ಸೆಕ್ಷನ್ 144 ಜಾರಿಗೊಳಿಸಿದ್ದೇವೆ. ಪ್ರತಿಭಟನೆ ಮಾಡಲು ನನ್ನದೇನೂ ತಕರಾರಿಲ್ಲ. ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ ಬೇಡ ಎಂದಿದ್ದಾರೆ.

lokesh

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

2 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

2 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

2 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

2 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

3 hours ago