ಮೈಸೂರು: ನಗರದ ಸೇಂಟ್ ಫಿಲೋಮಿನಾ ಕಾಲೇಜು ಹಾಗೂ ಯೂತ್ ರೆಡ್‌ಕ್ರಾಸ್ ಮತ್ತು ಎನ್‌ಎಸ್‌ಎಸ್ ಮತ್ತು ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ನಗರದ ಬನ್ನಿಮಂಟಪದಲ್ಲಿರುವ ಸೇಂಟ್ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ನಡೆದ ಶಿಬಿರದಲ್ಲಿ ಕಾಲೇಜಿನ ೭೦ ಮಂದಿ ಯುವಕ-ಯುವತಿಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ, ಬೇಸಿಗೆ ಸಂದರ್ಭದಲ್ಲಿ ರಕ್ತದಾನ ಮಾಡುವಲ್ಲಿ ಯಾರು ಮುಂದಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ, ಸೇಂಟ್ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.
ಮೈಸೂರು ಧರ್ಮಕ್ಷೇತ್ರದ ರೆಕ್ಟರ್ ಮತ್ತು ಮ್ಯಾನೇಜರ್ ಡಾ.ಬರ್ನಾಡ್ ಮೊರಾಸ್, ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ ಜೆ.ಡಿ.ಸಲ್ಡಾನ್ಹಾ, ಫ್ರಾನ್ಸಿಸ್ ಡಿಸೋಜಾ, ದೀಪ್ತಿ, ಎನ್‌ಎಸ್‌ಎಸ್ ಆಡಳಿತಾಧಿಕಾರಿ ಜೋಯಲ್ ಇತರರು ಹಾಜರಿದ್ದರು.