ಮೈಸೂರು

ತಂದೆಯವರ ನೆನಪಿನಲ್ಲಿ ಪ್ರತಿ ವರ್ಷವೂ ರಕ್ತದಾನ : ದರ್ಶನ್‌ ಧ್ರುವ ನಾರಾಯಣ್

ನಂಜನಗೂಡು : ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಅವರ ಸವಿ ನೆನಪಿನಲ್ಲಿ ನಂಜನಗೂಡಿನಲ್ಲಿ ಬೃಹತ್‌ ರಕ್ತದಾನ ಶಿಬಿರವನ್ನ ಆಯೋಜನೆ ಮಾಡಲಾಗಿತ್ತು.
ನಗರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಧ್ರುವನಾರಾಯಣ್ ಅಭಿಮಾನಿಗಳು ಆಯೋಜನೆ ಮಾಡಿದ್ದ ಬೃಹತ್‌ ರಕ್ತದಾದ ಶಿಬಿರಕ್ಕೆ ದರ್ಶನ್‌ ಧ್ರುವನಾರಾಯಣ್ ಅವರು ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಅವರು ರಕ್ತದಾನ ಶ್ರೇಷ್ಠದಾನ ಇದರಿಂದ ಹಲವಾರು ಜೀವಗಳನ್ನು ಉಳಿಸಬಹುದು ತುರ್ತು ಸಂದರ್ಭದಲ್ಲಿ ಪ್ರಾಣಾಪಾಯದಲ್ಲಿರುವವರ ಜೀವ ಉಳೀಸಲು ರಕ್ತ ಬಹಳ ಮುಖ್ಯ, ನಮ್ಮ ತಂದೆಯವರ ನೆನಪಿನಲ್ಲಿ ಇಂತಹ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿರುವ ನಂಜನಗೂಡಿನ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ.ಮುಂದೆಯೂ ಕೂಡ ನಮ್ಮ ತಂದೆಯವರ ನೆನಪಿನಲ್ಲಿ ಪ್ರತಿ ವರ್ಷ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ನಮ್ಮ ತಂದೆಯವರು ಕೂಡ ಅಪರೂಪದ ಎ.ಬಿ ಪಾಸಿಟಿವ್‌ ರಕ್ತದ ಗುಂಪನ್ನ ಹೊಂದಿದ್ದರು,ಅವರ ಹೆಸರಿನಲ್ಲಿ ಈ ರೀತಿ ಸಮಾಜಮುಖಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.ಇದೇ ವೇಳೆ ದರ್ಶನ್‌ ಅವರು ಧ್ರುವನಾರಾಯಣ್ ಅವರ  ನೆನಪಿಗಾಗಿ ವಿವಿಧ ಬಗೆಯ ಸಸಿಗಳನ್ನು ಕಾರ್ಯಕರ್ತರಿಗೆ ವಿತರಣೆ ಮಾಡಿದರು.

ಧ್ರುವನಾರಾಯಣ್ ಅಭಿಮಾನಿಗಳು ಹಾಗೂ ಲಯನ್ಸ್ ಜೀವಧಾರ‌ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದ ಸುಮಾರು 150 ಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನದ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್ ,ಶಂಕರ್, ಶ್ರೀಕಂಠ ನಾಯಕ,ಮುಖಂಡರಾದ ಮಂಜುನಾಥ್,ಗೋವಿಂದ್ ರಾಜ್ ನಾಗರಾಜಯ್ಯ, ಧ್ರುವ ನಾರಾಯಣ್ ಅವರ ಅಭಿಮಾನಿ ಬಳಗದ ಯುವಕರು,ನಗರಸಭಾ ಸದಸ್ಯರು ಸೇರಿದಂತೆ ನೂರಾರು ಮಂದಿ ಭಾಗಿಯಾಗಿದ್ದರು.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago