Mysore
26
light rain

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ಕಡಕೋಳ ಟೋಲ್ ಪ್ಲಾಜಾ ಬಳಿ ಹೊತ್ತಿ ಉರಿದ ಬಿಎಂ ಡಬ್ಲ್ಯು ಕಾರು

ಮೈಸೂರು : ಬಿಎಂ ಡಬ್ಲ್ಯು ಕಾರೊಂದು ರಾಷ್ಟ್ರೀಯ ಹೆದ್ದಾರಿ ಮಧ್ಯೆಯಲ್ಲಿ ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ.

ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸುತ್ತಿದ್ದಂತೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾದರ್ಧದಲ್ಲಿ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ತಕ್ಷಣ ಕಾರಿನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಕಾರಿನ ಎಂಜಿನ್ ನಲ್ಲಿ ಸಮಸ್ಯೆಯುವಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ