ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ
ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ ಲಕ್ಷ ರೂ. ಮೌಲ್ಯದ ಬೋಟ್ ಖರೀದಿಸಿದೆ.
ಕುಕ್ಕರಹಳ್ಳಿ ಕೆರೆ ನೀರಿನ ದುವಾರ್ಸನೆ ತಪ್ಪಿಸುವಂತೆ ನಗರದ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ಪಕ್ಷಿ ವೀಕ್ಷಕರು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಮನವಿಗಳನ್ನು ಸಲ್ಲಿಸಿದ್ದವು. ಈ ಹಿನ್ನೆಲೆ ಯಲ್ಲಿ ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಿರುವ ಮೈಸೂರು ವಿವಿ, ಇದೀಗ ಅಂದಾಜು ೩ ಲಕ್ಷ ರೂ. ವೆಚ್ಚದ ಬೋಟ್‌ಗಳನ್ನು ಗೋವಾದಿಂದ ಖರೀದಿಸಿ ತಂದಿದ್ದು, ನುರಿತ ತಜ್ಞರ ತಂಡದಿಂದ ಸ್ವಚ್ಛತೆ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದೆ.
ಮೈಸೂರಿಗೆ ಬರುವ ಪ್ರವಾಸಿಗರು ಮತ್ತು ವಾಯು ವಿಹಾರಿಗಳಿಗೆ ಕುಕ್ಕರಹಳ್ಳಿ ಕೆರೆ ಜನಪ್ರಿಯ ಹಾಗೂ ನೆಚ್ಚಿನ ತಾಣ. ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಅವಽಯಲ್ಲಿ ಇದೇ ಕೆರೆ ದಡದಲ್ಲಿ ಕುಳಿತು ಕವಿತೆ ರಚಿಸುತ್ತಿದ್ದರು. ಈಗಲೂ ನಟ ಶಿವರಾಜ್‌ಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದರೆ ವಾಕಿಂಗ್‌ಗಾಗಿ ಕುಕ್ಕರಹಳ್ಳಿ ಕೆರೆಗೆ ಬರುತ್ತಾರೆ.
ಇದನ್ನೂ ಓದಿ:-ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ
ಕಲುಷಿತ ನೀರಿನಿಂದ ಸಾವಿರಾರು ಜಲಚರಗಳು ಸಾವನ್ನ ಪ್ಪಿವೆ. ಇದು ಪರಿಸರ ಪ್ರೇಮಿಗಳು ಹಾಗೂ ಕುಕ್ಕರಹಳ್ಳಿ ಕೆರೆ ಒಡನಾಡಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.
ಕುಕ್ಕರಹಳ್ಳಿ ಕೆರೆಯನ್ನು ಉಳಿಸುವಂತೆ ಹಿಂದಿನಿಂದಲೂ ಸಾಕಷ್ಟು ಹೋರಾಟಗಳು ನಡೆದಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಾಕಷ್ಟು ದೂರು, ಸಲಹೆ, ವರದಿಗಳನ್ನು ನೀಡಿದ್ದಾರೆ. ಈ ಎಲ್ಲ ಕಾರಣಕ್ಕಾಗಿ ವಿಶ್ವವಿ ದ್ಯಾನಿಲಯದ ಕುಲಸಚಿವರಾದ ಎಂ. ಕೆ. ಸವಿತಾ ಮುತುವರ್ಜಿ ವಹಿಸಿ, ಈ ಬಾರಿ ಕೆರೆಯನ್ನು ಶಾಶ್ವತವಾಗಿ ಶುದ್ಧಿಗೊಳಿಸಲು ನಿರ್ಧರಿಸಿದ್ದಾರೆ.
ಕುಕ್ಕರಹಳ್ಳಿ ಕೆರೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವಂತೆ ಅನೇಕ ಸಂಘ ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಔಟ್ ಬ್ಯಾಕ್ ಸಂಸ್ಥೆಯೊಂದಿಗೆ ಚರ್ಚಿಸಿ, ಬೋಟ್ ತರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನುರಿತ ಈಜುಪಟುಗಳು, ಸ್ವಚ್ಛತಾ ತಂಡಕ್ಕೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕುಕ್ಕರಹಳ್ಳಿ ಕೆರೆಗೆ ಧಕ್ಕೆ ಆಗದಂತೆ ಮತ್ತಷ್ಟು ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗುವುದು. -ಎಂ. ಕೆ. ಸವಿತಾ, ಕುಲಸಚಿವರು, ಮೈಸೂರು ವಿಶ್ವವಿದ್ಯಾನಿಲಯ
ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…
ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…