ಮೈಸೂರು

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ

ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ ಲಕ್ಷ ರೂ. ಮೌಲ್ಯದ ಬೋಟ್ ಖರೀದಿಸಿದೆ.

ಕುಕ್ಕರಹಳ್ಳಿ ಕೆರೆ ನೀರಿನ ದುವಾರ್ಸನೆ ತಪ್ಪಿಸುವಂತೆ ನಗರದ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ಪಕ್ಷಿ ವೀಕ್ಷಕರು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಮನವಿಗಳನ್ನು ಸಲ್ಲಿಸಿದ್ದವು. ಈ ಹಿನ್ನೆಲೆ ಯಲ್ಲಿ ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಿರುವ ಮೈಸೂರು ವಿವಿ, ಇದೀಗ ಅಂದಾಜು ೩ ಲಕ್ಷ ರೂ. ವೆಚ್ಚದ ಬೋಟ್‌ಗಳನ್ನು ಗೋವಾದಿಂದ ಖರೀದಿಸಿ ತಂದಿದ್ದು, ನುರಿತ ತಜ್ಞರ ತಂಡದಿಂದ ಸ್ವಚ್ಛತೆ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದೆ.

ಮೈಸೂರಿಗೆ ಬರುವ ಪ್ರವಾಸಿಗರು ಮತ್ತು ವಾಯು ವಿಹಾರಿಗಳಿಗೆ ಕುಕ್ಕರಹಳ್ಳಿ ಕೆರೆ ಜನಪ್ರಿಯ ಹಾಗೂ ನೆಚ್ಚಿನ ತಾಣ. ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಅವಽಯಲ್ಲಿ ಇದೇ ಕೆರೆ ದಡದಲ್ಲಿ ಕುಳಿತು ಕವಿತೆ ರಚಿಸುತ್ತಿದ್ದರು. ಈಗಲೂ ನಟ ಶಿವರಾಜ್‌ಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದರೆ ವಾಕಿಂಗ್‌ಗಾಗಿ ಕುಕ್ಕರಹಳ್ಳಿ ಕೆರೆಗೆ ಬರುತ್ತಾರೆ.

ಇದನ್ನೂ ಓದಿ:-ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಕಲುಷಿತ ನೀರಿನಿಂದ ಸಾವಿರಾರು ಜಲಚರಗಳು ಸಾವನ್ನ ಪ್ಪಿವೆ. ಇದು ಪರಿಸರ ಪ್ರೇಮಿಗಳು ಹಾಗೂ ಕುಕ್ಕರಹಳ್ಳಿ ಕೆರೆ ಒಡನಾಡಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.

ಕುಕ್ಕರಹಳ್ಳಿ ಕೆರೆಯನ್ನು ಉಳಿಸುವಂತೆ ಹಿಂದಿನಿಂದಲೂ ಸಾಕಷ್ಟು ಹೋರಾಟಗಳು ನಡೆದಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಾಕಷ್ಟು ದೂರು, ಸಲಹೆ, ವರದಿಗಳನ್ನು ನೀಡಿದ್ದಾರೆ. ಈ ಎಲ್ಲ ಕಾರಣಕ್ಕಾಗಿ ವಿಶ್ವವಿ ದ್ಯಾನಿಲಯದ ಕುಲಸಚಿವರಾದ ಎಂ. ಕೆ. ಸವಿತಾ ಮುತುವರ್ಜಿ ವಹಿಸಿ, ಈ ಬಾರಿ ಕೆರೆಯನ್ನು ಶಾಶ್ವತವಾಗಿ ಶುದ್ಧಿಗೊಳಿಸಲು ನಿರ್ಧರಿಸಿದ್ದಾರೆ.

ಕುಕ್ಕರಹಳ್ಳಿ ಕೆರೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವಂತೆ ಅನೇಕ ಸಂಘ ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಔಟ್ ಬ್ಯಾಕ್ ಸಂಸ್ಥೆಯೊಂದಿಗೆ ಚರ್ಚಿಸಿ, ಬೋಟ್ ತರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನುರಿತ ಈಜುಪಟುಗಳು, ಸ್ವಚ್ಛತಾ ತಂಡಕ್ಕೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕುಕ್ಕರಹಳ್ಳಿ ಕೆರೆಗೆ ಧಕ್ಕೆ ಆಗದಂತೆ ಮತ್ತಷ್ಟು ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗುವುದು. -ಎಂ. ಕೆ. ಸವಿತಾ, ಕುಲಸಚಿವರು, ಮೈಸೂರು ವಿಶ್ವವಿದ್ಯಾನಿಲಯ

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

11 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

12 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

12 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

13 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

13 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

17 hours ago