ಸುತ್ತೂರು : ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ ದಂಡೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೋಣಿ ವಿಹಾರ ಆಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಎಸ್.ಪಿ.ಉದಯ್ ಶಂಕರ್ ಅವರು ಕುಟುಂಬ ಸಮೇತ ಆಗಮಿಸಿ ದೋಣಿ ವಿಹಾರ ಮಾಡಿದರು.
ಬಳಿಕ ಪ್ರತಿಕ್ರಿಯೆ ನೀಡಿದ ಅವರು ದೋಣಿ ವಿಹಾರಕ್ಕಾಗಿ ನಗರ ಪ್ರದೇಶಗಳಿಗೆ ಹೋಗಬೇಕು. ಹೀಗಿರುವಾಗ ಇಲ್ಲಿ ಅವಕಾಶ ಕಲ್ಪಿಸಿರುವುದು ಗ್ರಾಮೀಣ ಭಾಗದ ಜನರಲ್ಲಿ ಸಂತೋಷ ತಂದಿದೆ ಎಂದರು.
ಪ್ರತಿ ವರ್ಷವೂ ಸುತ್ತೂರು ಜಾತ್ರೆಯ ಪ್ರಯುಕ್ತ ಕಪಿಲಾ ನದಿಯಲ್ಲಿ ದೋಣಿ ವಿಹಾರ ಆಯೋಜಿಸಲಾಗುತ್ತದೆ. ವರ್ಷದಿಂದ ವರ್ಷಕ್ಕೆ ಭಕ್ತಾದಿಗಳು ಜಾಸ್ತಿಯಾಗುತ್ತಿದ್ದಾರೆ. ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ ಭಕ್ತಾದಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.
ಎಲ್ಲರ ಸಹಕಾರದಿಂದ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಅಂತ ತಿಳಿಸಿದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳ ಕುಟುಂಬದವರಾದ ಡಾ.ಮಹೇಶನ್, ಡಾ.ಎಸ್.ಯು.ಹರಪ್ರಸಾದ್, ಪ್ರೊ. ಎಂ.ಎಸ್.ಅಭಿನಂದನ್ ಹಾಗೂ ಕುಟುಂಬದವರಿದ್ದರು.
ಇನ್ನು ಶಾಲಾಮಕ್ಕಳು, ಭಕ್ತಾದಿಗಳು ದೋಣಿ ವಿಹಾರ ಮಾಡಿ ಆನಂದಿಸಿದರು.
'ಎಲೆ? ಯಾವೂರೆಲೆ ಕಂಡರಿ ಇಲ್ಲಿ. ಅರೆಕಲ್ಲ ಮೇಲೆನೆ ಊಟ. ಪ್ಲಾಸ್ಟಿಕ್ ಲೋಟದಲ್ಲಿರೋ ನೀರಾ ಮುಂದಿರೋ ಅರೆಕಲ್ಲ ಮೇಲೆ ಚಿಮುಕಿಸಿ ರೆಡಿ…
ಹಾದಿಬದಿಯ ನಿರಾಶ್ರಿತರು ಆಕಾಶವನ್ನೇ ಹೊದಿಕೆಯಾಗಿಸಿಕೊಂಡು,ಭೂಮಿಯನ್ನೇ ಹಾಸಿಗೆಯನ್ನಾಗಿಸಿ ಕೊಂಡು ಸಿಕ್ಕ ಕೆಲಸ ಮಾಡುತ್ತಾ, ಸಿಕ್ಕಸಿಕ್ಕ ಹಾಗೆ ಬದುಕು ಸವೆಸುತ್ತಾ ಕಳೆಯುತ್ತಾರೆ. ಚಳಿಯಾದರೇನು,…
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…