Mysore
21
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚಾಮರಾಜ ಬಲದಂಡೆ ನಾಲೆಯ ಏರಿಯ ಪಕ್ಕದ ಪೊದೆಯಲ್ಲಿ ಶವ ಪತ್ತೆಯಾಗಿದ್ದು, ಸುಮಾರು 30 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಇದಾಗಿದೆ.

ಯಾರೋ ದುಷ್ಕರ್ಮಿಗಳು ಮುಖದ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಮೃತನ ಮೈಮೇಲೆ ಹಸಿರು ಮತ್ತು ಕಪ್ಪು ಬಣ್ಣದ ಶರ್ಟು ಹಾಗೂ ಕಪ್ಪು ಬಣ್ಣದ ಪ್ಯಾಂಟು ಇದ್ದು
ಬಲಗೈ ರಟ್ಟೆಯಲ್ಲಿ ಕೆಂಚ ಎಂದು ಹಚ್ಚೆ ಗುರುತು ಇದೆ.

ಘಟನಾ ಸ್ಥಳಕ್ಕೆ ಕೆ.ಆರ್.ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!