Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಶಾಲೆಯೊಂದಕ್ಕೆ ಬಾಂಬ್‌ ಬೆದರಿಕೆ ; ವಿದ್ಯಾರ್ಥಿಗಳು, ಸಿಬ್ಬಂದಿ ಆತಂಕ!

ಮೈಸೂರು:  ತಾಲ್ಲೂಕಿನ ಇಂಟರ್‌ನ್ಯಾಷನಲ್ ವಸತಿ ಶಾಲೆಯೊಂದಕ್ಕೆ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿದ್ದು, ಪೊಲೀಸರು ಶಾಲೆಗೆ ಆಗಮಿಸಿ ಸಂಪೂರ್ಣ ತಪಾಸಣೆ ನಡೆಸಿದ್ದಾರೆ.

ತಾಲ್ಲೂಕಿನ ಭುಗತಹಳ್ಳಿ ಬಳಿ ಇರುವ ಜ್ಞಾನ ಸರೋವರ ಇಂಟರ್‌ನ್ಯಾಷನಲ್ ವಸತಿ ಶಾಲೆಗೆ ಇಮೇಲ್ ಒಂದು ಬಂದಿದೆ. ಅದರಲ್ಲಿ ನಿಮ್ಮ ಶಾಲೆಗೆ ಬಾಂಬ್ ಇಟ್ಟಿರುವುದಾಗಿ ಮಾಹಿತಿ ಬಂದಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಕೆಲಕಾಲ ಆತಂಕಕ್ಕೆ ಒಳಗಾಗಿದ್ದಾರೆ. ಬಳಕ ಕೂಡಲೇ ಶಾಲೆಯ ಆಡಳಿತ ಮಂಡಳಿ ವತಿಯಿಂದ ಬುಧವಾರ ಎಸ್‌.ಪಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ಈ ಸಂಬಂಧ ಬುಧವಾರ ಬೆಳಿಗ್ಗೆ ವರುಣ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಶ್ವಾನದಳ ಶಾಲೆಯ ಆವರಣವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಲಾಗಿದ್ದು, ಇದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

Tags:
error: Content is protected !!