ಮೈಸೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು 2.25ಲಕ್ಷ ದಂಡ ವಿಧಿಸಿದೆ.
ದಂಡ ವಿಧಿಸಿ ಗುರುವಾರ ಆದೇಶ ನೀಡಿರುವ ನ್ಯಾಯಲಯ, ಪಾವತಿಸುವಲ್ಲಿ ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತನ್ನ ತೀರ್ಪು ಪ್ರಕಟಿಸಿದೆ.
ಕೃಷ್ಣ 2015ರಲ್ಲಿ ಲಲಿತಾದ್ರಿಪುರದ ಕುಮಾರ್ ಅವರಿಂದ ಸಾಲ ಪಡೆದಿದ್ದರು. ಇದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್‌ನ ಚೆಕ್ ನೀಡಿದ್ದರು. ಕುಮಾರ್ ಆ ಚೆಕ್‌ನ್ನು ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.