ಮೈಸೂರು

ಚೆಕ್‌ ಬೌನ್ಸ್‌ : ಸ್ನೇಹಮಯಿ ಕೃಷ್ಣಗೆ 2.25ಲಕ್ಷ ದಂಡ

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ ನ್ಯಾಯಾಲಯವು 2.25ಲಕ್ಷ ದಂಡ ವಿಧಿಸಿದೆ.

ದಂಡ ವಿಧಿಸಿ ಗುರುವಾರ ಆದೇಶ ನೀಡಿರುವ ನ್ಯಾಯಲಯ, ಪಾವತಿಸುವಲ್ಲಿ ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತನ್ನ ತೀರ್ಪು ಪ್ರಕಟಿಸಿದೆ.

ಕೃಷ್ಣ 2015ರಲ್ಲಿ ಲಲಿತಾದ್ರಿಪುರದ ಕುಮಾರ್‌ ಅವರಿಂದ ಸಾಲ ಪಡೆದಿದ್ದರು. ಇದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್‌ ಕೋ-ಆಪರೇಟಿವ್‌ ಬ್ಯಾಂಕ್‌ನ ಚೆಕ್‌ ನೀಡಿದ್ದರು. ಕುಮಾರ್‌ ಆ ಚೆಕ್‌ನ್ನು ಬ್ಯಾಂಕ್‌ ಖಾತೆಗೆ ಹಾಕಿದಾಗ ಬೌನ್ಸ್‌ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ದೂರು ದಾಖಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

4 mins ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

37 mins ago

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

52 mins ago

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…

1 hour ago

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

2 hours ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

2 hours ago