Mysore
27
broken clouds

Social Media

ಭಾನುವಾರ, 01 ಮಾರ್ಚ್ 2026
Light
Dark

ಟಿ.ನರಸೀಪುರ: ಯುಗಾದಿ ಪುಣ್ಯಸ್ನಾನ ಮಾಡಲು ಹೋಗಿ ಬಾಲಕ ನೀರುಪಾಲು

ಟಿ.ನರಸೀಪುರ: ಯುಗಾದಿ ಪುಣ್ಯಸ್ನಾನ ಮಾಡಲು ಹೋಗಿ ಬಾಲಕ ನೀರು ಪಾಲಾಗಿರುವ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ.

ಶರತ್‌ ಎಂಬುವವನೇ ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿರುವ ಶರಣ್, ಇಂದು ಬೆಳಿಗ್ಗೆ ಪುಣ್ಯಸ್ನಾನ ಮಾಡಲು ನದಿಗೆ ಆಗಮಿಸಿದ ವೇಳೆ ದುರ್ಘಟನೆ ಸಂಭವಿಸಿದೆ.

ನೀರಿನ ಹಾಳ ಅರಿಯದೇ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಟಿ.ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:
error: Content is protected !!