ಮೈಸೂರು : ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ.ಅರ್ ಅಂಬೇಡ್ಕರ್ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ ರಾಂ ಜನ್ಮ ದಿನಾಚರಣೆ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಾ. ಬಾಬು ಜಗಜೀವನ್ ರಾಂ ಜಯಂತಿಯನ್ನು ಏಪ್ರಿಲ್ 05 ರಂದು ಹಾಗೂ ಏಪ್ರಿಲ್ 14 ರಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಣೆ ಮಾಡಲಾಗುವುದು.
ಡಾ. ಬಿ.ಆರ್ ಅಂಬೇಡ್ಕರ್ ಭವನದ ಕಾಮಗಾರಿಗೆ 23 ಕೋಟಿ ಗೆ ನಾಳೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಆಗುತ್ತದೆ. ನಂತರ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಸ್ಥಳೀಯ ಸಂಸ್ಥೆಗಳು ಹಾಗೂ ತಾಲ್ಲೂಕು ಪಂಚಾಯತ್ ವತಿಯಿಂದ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಪ್ರೋತ್ಸಾಹಕ್ಕೆ ಬಹುಮಾನ ನೀಡುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು.
ಇಬ್ಬರು ಮಹನೀಯರ ಜಯಂತಿಗಳ ಆಚರಣೆಯ ಸಂಬಂಧ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲು ಅಗತ್ಯ ಕ್ರಮವಹಿಸಬೇಕು ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಉಪಹಾರ ಹಾಗೂ ನೀರಿನ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಅವರು ಮಾತನಾಡಿ ಶಿಷ್ಟಾಚಾರದ ಅನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಣ ಮಾಡಿ ಜನಪ್ರತಿನಿಧಿಗಳು ಹಾಗೂ ಮುಖಂಡರಿಗೆ ನೀಡಲಾಗುವುದು. ಜಯಂತಿಗಳ ಬಗ್ಗೆ ಕರಪತ್ರ, ಪೋಸ್ಟರ್, ಬ್ಯಾನರ್ ಹಾಗೂ ಪ್ಲೆಕ್ಸ್ ಗಳನ್ನು ಮುದ್ರಿಸಲಾಗುವುದು. ಜಯಂತಿಗೆ ಭಾಗವಹಿಸುವವರಿಗೆ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು.
ಸಮುದಾಯದ ಮುಖಂಡರು ಮಾತನಾಡಿ ನಗರದಲ್ಲಿ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ಕಾಮಗಾರಿಯನ್ನು ಬೇಗ ಮುಗಿಸಿ ಬಳಕೆಗೆ ನೀಡಬೇಕು. ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆ ಆಗಬೇಕು. ಸರ್ಕಾರಿ ಶಾಲೆ, ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಯಂತಿಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯುಕೇಶ್ ಕುಮಾರ್ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…