ಮೈಸೂರು : ಇ-ಸ್ವತ್ತು ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-4ರ ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಕಂದಾಯ ಅಧಿಕಾರಿ ಎಂ.ಎನ್. ನಂದೀಶ್, ಬಿಲ್ ಕಲೆಕ್ಟರ್ ರಜಾಕ್ ಬಲೆಗೆ ಬಿದ್ದವರು.
ವಲಯ ಕಚೇರಿಯಲ್ಲಿ ಸಾರ್ವಜನಿಕರೊಬ್ಬರು ಇ-ಸ್ವತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ನಂದೀಶ್ ಮತ್ತು ರಜಾಕ್ 25 ಸಾವಿರ ರೂ.ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಇಂದು ಇಬ್ಬರು ನೌಕರರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್‌ಗಳಾದ ಪಿ.ಉಮೇಶ್, ಲೋಕೇಶ್, ರವಿಕುಮಾರ್, ಸಿಬ್ಬಂದಿಗಳಾದ ಆರ್.ಎನ್. ಲೋಕೇಶ್, ಎಚ್.ಎನ್. ಗೋಪಿ, ಲೋಕೇಶ್ ರಾಜೇ ಅರಸ್, ಕಾಂತರಾಜು, ಮೋಹನ್ ಗೌಡ, ಮೋಹನ್ ಕುಮಾರ್,ಲೋಕೇಶ್, ದಿನೇಶ್ ಭಾಗವಹಿಸಿದ್ದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…