ಮೈಸೂರು

ಮೈಸೂರು ಅರಮನೆ ವೀಕ್ಷಣೆಗೂ ಬಕಿಂಗ್ಹ್ಯಾಮ್ ಅರಮನೆ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ ನಿಯಮವಿದೆ. ಈ ನಿಯಮ ಮೈಸೂರು ಅರಮನೆ ವೀಕ್ಷಣೆಗೂ ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅರಮನೆ ಉಳಿಯುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆತಂಕ ವ್ಯಕ್ತಪಡಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ಗೆ ತುಂಬಿಸುವ ಹೀಲಿಯಂ ಸಿಲಿಂಡರ್ ಸಿಡಿದು ಮೂವರು ಸಾವನ್ನಪ್ಪಿದ್ದಾರೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಮೈಸೂರು ಅರಮನೆ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಇದೊಂದು ಪಾರಂಪರಿಕ ಕಟ್ಟಡ. ಇಂತಹ ಅರಮನೆಯನ್ನು ಮತ್ತೆ ಕಟ್ಟಲು ಸಾಧ್ಯವಿಲ್ಲ, ಇದರ ಅರಿವು ಜಿಲ್ಲಾಡಳಿತಕ್ಕಾಗಲಿ ಸಂಬಂಧಪಟ್ಟ ಮಂತ್ರಿಗಳಿಗಾಗಲಿ ಏಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನು ಓದಿ: ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಘಟನೆ ನಡೆದ ಸ್ಥಳದಲ್ಲಿ ಸಿಸಿ ಕ್ಯಾಮರಾ ಇದೆ. ಆದರೆ ಅದು ಕೆಟ್ಟು ನಿಂತಿದೆ ಎಂಬ ಮಾಹಿತಿ ಇದೆ. ಕಡಿಮೆ ಹಣದಲ್ಲಿ ಸಿಸಿ ಟಿವಿ ಹಾಕಿದ್ದಾರೆ. ಹೀಗಾದಲ್ಲಿ ನಡೆದ ಘಟನೆಯ ವಾಸ್ತವ ತಿಳಿಯುವುದು ಹೇಗೆ ಎಂದು ಪ್ರಶ್ನಿಸಿದರು.

ಮೈಸೂರು ಪಾರಂಪರಿಕ ಕಟ್ಟಡಗಳ ನಗರ. ಆದರೆ, ನಗರದಲ್ಲಿರುವ ಜಿಲ್ಲಾಧಿಕಾರಿ ಹಳೆ ಕಚೇರಿಯಲ್ಲಿ ಇಂದು ನಾಯಿ, ನರಿಗಳು ಮಲಗುತ್ತಿವೆ. ಅಗ್ನಿಶಾಮಕ ದಳದ ದ್ವಾರ ಬಿದ್ದು ವರ್ಷಗಳೇ ಕಳೆದರೂ ಕ್ರಮ ಕೈಗೊಂಡಿಲ್ಲ. ಇಲ್ಲಿ ಜಿಲ್ಲಾಡಳಿತಕ್ಕೂ ಜವಾಬ್ದಾರಿ ಇಲ್ಲ. ನಗರಪಾಲಿಕೆ ಆಯುಕ್ತರಿಗೂ ಜವಾಬ್ದಾರಿ ಇಲ್ಲ ಎಂದು ಕಿಡಿಕಾರಿದರು.

ಅರಮನೆಯಲ್ಲಿ ಪ್ರವೇಶ ಶುಲ್ಕ ಹೆಚ್ಚುತ್ತಿದೆ. ವಾಹನ ನಿಲ್ದಾಣ, ಚಪ್ಪಲಿ ಸ್ಟ್ಯಾಂಡ್ ಎಲ್ಲದಕ್ಕೂ ದುಡ್ಡು ವಸೂಲಾಗುತ್ತಿದೆ. ಪೊಲೀಸರು ಸಿಕ್ಕಸಿಕ್ಕವರನ್ನು ಅರಮನೆ ಒಳಗೆ ಬಿಡುತ್ತಿದ್ದಾರೆ. ಎಲ್ಲಾ ಕಡೆ ಹಣ ವಸೂಲಿಯಾಗುತ್ತಿದೆ. ಅರಮನೆ ಒಳಗೆ ಬರುವವರನ್ನು ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

4 hours ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

4 hours ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

4 hours ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

4 hours ago

ಮೈಮುಲ್ ಆಡಳಿತ ಮಂಡಳಿ ಚುನಾವಣೆಯತ್ತ ಎಲ್ಲರ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…

4 hours ago