ಮೈಸೂರು

ಮೈಸೂರು-ಕೊಡಗು ಕ್ಷೇತ್ರಕ್ಕೆ ಮರುಚುನಾವಣೆ ನಡೆಸಿ: ಹೈಕೋರ್ಟ್‌ ಮೆಟ್ಟಿಲೇರಿದ ಬಿಎಸ್‌ಪಿ ಅಭ್ಯರ್ಥಿ!

ಮೈಸೂರು: ಸೂಕ್ತ ಕಾರಣವಿಲ್ಲದೇ ನನ್ನ ನಾಮಪತ್ರವನ್ನು ತಿರಸ್ಕರಿಸಿದ ಕಾರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಆಯ್ಕೆಯನ್ನು ಅಸಿಂಧು ಗೊಳಿಸಿ, ಈ ಕ್ಷೇತ್ರಕ್ಕೆ ಮತ್ತೊಮ್ಮೆ ಚುನಾವಣೆ ನಡೆಸಬೇಕು ಎಂದು ಬಿಎಸ್‌ಪಿ (ಬಹುಜನ ಸಮಾಜ ಪಾರ್ಟಿ) ಪಕ್ಷದ ರೇವತಿ ರಾಜ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಮ್ಮ ನಾಮಪತ್ರವನ್ನು ಯಾವುದೇ ಕಾರಣವಿಲ್ಲದೇ ಜಿಲ್ಲಾ ಚುನಾವಣಾಧಿಕಾರಿಗಳ ತಿರಸ್ಕರಿಸುವ ಮೂಲಕ ನನ್ನನ್ನು ಚುನಾವಣೆಯಲ್ಲಿ ನಿಲ್ಲದಂತೆ ಮಾಡಿದ್ದಾರೆ. ಈ ಕ್ರಮದ ಬಗ್ಗೆ ನ್ಯಾಯಾಲಯ ಕ್ರಮ ಕೈಗೊಳ್ಳಬೇಕು ಎಂದು ರೇವತಿರಾಜ್‌ ಅಲಿಯಾಸ್‌ ಭೀಮ ಪುತ್ರಿ ರೇವತಿ ರಾಜ್‌ ಚುನಾವಣಾ ಆಯೋಗದ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯಲ್ಲೇನಿದೆ?: ಅರ್ಜಿದಾರರು ಏ.4 2024 ರಂದು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ಕಾಲಂ 7, 7(A), 7(a)(b) ಗಳನ್ನು ಸರಿಯಾಗಿ ಭರ್ತಿ ಮಾಡಿಲ್ಲ ಎಂದು ಚುನಾವಣಾಧಿಕಾರಿಗಳು ಅರ್ಜಿ ತಿರಸ್ಕರಿಸಿದ್ದರು. ಬಳಿ ಏ.5ರ ಬೆಳಿಗ್ಗೆ 11ರ ಒಳಗಾಗಿ ಎಲ್ಲವನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿದರೂ ಕೂಡಾ ಅರ್ಜಿ ಸರಿಯಾದ ಸಮಯಕ್ಕೆ ಬಂದಿಲ್ಲ ಎಂದು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಈ ಸಂಬಂಧ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಸಕಾರಣವಿಲ್ಲದೇ ಚುನಾವಣಾ ಅಧಿಕಾರಿಗಳು ತಮ್ಮ ಅರ್ಜಿಯನ್ನು ತಿರಸ್ಕರಿಸಿದ್ದು, ಇದೊಂದು ಕಾನೂನು ಬಾಹಿರವಾಗಿದೆ. ಈ ಕೂಡಲೇ ಯದುವೀರ್‌ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಮರುಚುನಾವಣೆ ನಡೆಸಬೇಕು ಎಂದು ರೇವತಿ ರಾಜ್‌ ಅರ್ಜಿಯಲ್ಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

1 hour ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

1 hour ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

2 hours ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

2 hours ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

2 hours ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

3 hours ago