ಮೈಸೂರು

ಬುದ್ಧಧಮ್ಮ ಅನುಭವದ ಮೇಲೆ ನಿಂತಿದೆ: ಭಗವಾನ್

ಪಬ್ಬಜ ಶಿಬಿರ ಸವಾರೋಪ ಸಮಾರಂಭ ಉದ್ಘಾಟನೆ.

ಮೈಸೂರು: ಸ್ವಾಮಿ ವಿವೇಕಾನಂದರನ್ನು ಕೇವಲ ಹಿಂದೂಧರ್ಮಕ್ಕೆ ಮಾತ್ರ ಸೀಮಿತ ಮಾಡಿದ್ದಾರೆ. ವಾಸ್ತವವಾಗಿ ನೋಡಿದರೆ ವಿವೇಕಾನಂದರು ಹಿಂದೂ ಧರ್ಮವನ್ನು ಒಪ್ಪಿಕೊಂಡಿರಲಿಲ್ಲ. ಅವರ ಸಂಪುಟಗಳನ್ನು ಓದಿದಾಗ ಬುದ್ಧರನ್ನು ಅಪಾರವಾಗಿ ಇಷ್ಟಪಡುತ್ತಿದ್ದರು ಎಂದು ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ತಿಳಿಸಿದರು.

ವಿಜಯನಗರ 1ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧವಿಹಾರದಲ್ಲಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಮತ್ತು ಭಾರತೀಯ ಬೌದ್ಧ ಮಹಾಸಭಾದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪಬ್ಬಜ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿವೇಕಾನಂದರು ಹಿಂದೂ ಧರ್ಮವನ್ನು ಟೀಕಿಸಿದಷ್ಟು ಬೇರಾರೂ ಟೀಕಿಸಿಲ್ಲ. ದೀನ-ದಲಿತರನ್ನು ಹಿಂದೂ ಧರ್ಮವು ತುಳಿದಷ್ಟು ಪ್ರಪಂಚದ ಬೇರಾವ ಧರ್ಮಗಳೂ ತುಳಿಯಲಿಲ್ಲ ಎಂದು ಹೇಳಿದರು.

ಇದೇ ವೇಳೆ ವಿಶ್ವಮೈತ್ರಿ ಬುದ್ಧವಿಹಾರದ ಡಾ.ಕಲ್ಯಾಣ ಸಿರಿ ಭಂತೇಜಿ ಅವರು ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ಕರ್ನಾಟಕ ಬುದ್ಧಧಮ್ಮ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ, ಭಾರತೀಯ ಬೌದ್ಧ ಮಹಾಸಭಾದ ಉಪಾಧ್ಯಕ್ಷ ಮಹೇಂದ್ರ ಮಂಕಾಳೆ, ಬೀದರ್‌ನ ಅಣದೂರು ಬುದ್ಧವಿಹಾರದ ಸಂಘಮಿತ್ರ ಭಂತೇಜಿ, ಸಂಘ ಸೇವಕ ಭಂತೇಜಿ, ಹೋರಾಟಗಾರ ಮಂಟೇಲಿಂಗಯ್ಯ, ಉಪಾಸಕರಾದ ಮನೋಹರ್ ಮೌರ್ಯ ಬಾಬುರಾವ್ ಅಣದೊರೆ, ಅರ್ಜುನ್‌ರಾವ್ ಕೇಸರಿ, ಕರ್ನಾಟಕ ಬುದ್ಧಧಮ್ಮ ಸಮಿತಿ ಸಹ ಕಾರ್ಯದರ್ಶಿ ಎಚ್.ಶಿವರಾಜು, ನಿವೃತ್ತ ಇಂಜಿನಿಯರ್ ಆರ್.ನಟರಾಜು, ವಕೀಲ ರಾಜು ಹಂಪಾಪುರ, ನಿಸರ್ಗ ಸಿದ್ದರಾಜು, ಟಿ.ಎಂ.ನಾಗರಾಜು, ಡಾ.ಜಗದೀಶ್, ಡಾ.ಜಗನ್ನಾಥ್, ಶಾಂತಿ ಮಂಜು, ಉತ್ತಂಬಳ್ಳಿ ನಾಗರಾಜು, ಮಾ ನಾಗಯ್ಯ  ಪ್ರೊ.ಅಮೂಲ್ಯ, ಡಾ.ಮಂಜು ಸತ್ತಿಗೆಹುಂಡಿ, ನಿರಂಜನ್, ಮೂರ್ತಿ, ಚನ್ನಪಟ್ಟಣ ಲಕ್ಷ್ಮಣ್, ಸಂಶೋಧಕ ರೂಪೇಶ್, ಸುರೇಶ್ ಕಂದೇಗಾಲ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಂಶೋಧಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago