ಮೈಸೂರು: ರಾಜ್ಯದಲ್ಲಿ ಗೋವಿನ ಮೇಲಿನ ದಾಳಿ ಹಾಗೂ ಹಲ್ಲೆಯ ಪ್ರಕರಣಗಳು ದಿನೇ ದಿನೇ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಮೈಸೂರಿನಲ್ಲಿ ದೇವರ ಹರಕೆಗೆ ಬಿಟ್ಟಿದ್ದ ಗೂಳಿ ಮೇಲೆ ಕಿಡಿಗೇಡಿಗಳು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹನಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದೇವರಿಗೆ ಹರಕೆಗೆಂದು ಬಿಟ್ಟಿದ್ದ ಗೂಳಿಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ.
ಗೂಳಿಯು ಹುಲ್ಲು ಮೇಯಲು ಹೋದಾಗ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು ಕೃತ್ಯ ಎಸಗಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ.