ಮೈಸೂರು: ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವಿಪ್ ಸಮಿತಿ ವತಿಯಿಂದ ಗ್ರಾಮೀಣ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ನಂಜನಗೂಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾರ್ಗದರ್ಶನದಂತೆ, ಬಿಳಿಗೆರೆ ಹೋಬಳಿ ಮಟ್ಟದಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳಿಂದ ಸುತ್ತೂರು ಗ್ರಾಮದಲ್ಲಿ ಎತ್ತಿನ ಗಾಡಿ ಜಾಥಾ ಹಮ್ಮಿಕೊಳ್ಳಲಾಯಿತು.
ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಮುಂಭಾಗದಿಂದ ಬಿಳಿಗೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಎತ್ತಿನ ಗಾಡಿ ಏರಿ ಸುತ್ತೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಈ ವೇಳೆ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ವಿವೇಕ್, ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಸುತ್ತೂರು, ಹೊಸಕೋಟೆ, ಬಿಳಿಗೆರೆ, ತುಂನೇರಳೆ, ನಗರ್ಲೆ ಹಾಗೂ ಕಾರ್ಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಳು, ಕಾರ್ಯದರ್ಶಿ, ತಾಲ್ಲೂಕು ಎನ್ ಅರ್.ಎಲ್ ಎಂ ನ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…
ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…