ಮೈಸೂರು

ರಾಜ್ಯದಲ್ಲಿ ನುಗ್ಗೇಕಾಯಿಗೆ ಬಂಪರ್‌ ಬೆಲೆ: ಗ್ರಾಹಕರ ಜೇಬಿಗೆ ಕತ್ತರಿ

ಮೈಸೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್‌ ದರದಷ್ಟೇ ಇದೆ.

ನುಗ್ಗೇಕಾಯಿ ಕೆಜಿಗೆ 600 ರಿಂದ 700ರೂಗೆ ಮಾರಾಟವಾಗುತ್ತಿದ್ದು, ನುಗ್ಗೇಕಾಯಿ ಖರೀದಿ ಅಸಾಧ್ಯ ಎಂದು ಜನಸಾಮಾನ್ಯರು ಬೇಸರ ಹೊರಹಾಕಿದ್ದಾರೆ.

ಇದನ್ನು ಓದಿ: 42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿ ಸೆರೆ: ಡಿಸಿಎಫ್‌ ಪರಮೇಶ್‌

ಹವಾಮಾನ ವೈಪರೀತ್ಯದಿಂದ ಈ ಬಾರಿ ನುಗ್ಗೇಕಾಯಿ ಬೆಳೆ ಬಂದಿಲ್ಲ. ಆದ್ದರಿಂದ ನುಗ್ಗೇಕಾಯಿ ಹೆಚ್ಚು ಸರಬರಾಜಾಗುತ್ತಿಲ್ಲ. ಬೆಲೆ ಕೂಡ ಗಗನಕ್ಕೇರಿದೆ.

ಮಾರುಕಟ್ಟೆಗಳಲ್ಲಿ ಸೊಪ್ಪು, ತರಕಾರಿಗಳ ಬೆಲೆ ತೀವ್ರ ಏರಿಕೆ ಆಗುತ್ತಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುವಂತಾಗಿದೆ.

ಹಿಂಗಾರು ಮಳೆ ವಿಳಂಬದಿಂದ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಇರುವ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ ಗಗನಕ್ಕೇರಿದೆ.

ಜೊತೆಗೆ ಹಸಿ ಬಟಾಣಿ ದರ ಕೂಡ ಭಾರೀ ಏರಿಕೆಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago