ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ.
ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ.
ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ.
ಮೈಸೂರಿನ ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಬಸ್ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…