ಮೈಸೂರು : ಕಾರು ಹಾಗೂ ಕೆಎಸ್ಆರ್‌ಟಿಸಿ ಬಸ್ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಕಾರು ಚಾಲಕ ಸಾವನ್ನಪ್ಪಿದ ಘಟನೆ ಕೆ.ಆರ್ ನಗರ ತಾಲೂಕಿನ ಮಂಜನಹಳ್ಳಿ ಬಳಿ ಬುಧವಾರ ನಡೆದಿದೆ.
ಕಾರಿನಲ್ಲಿದ್ದ ಮತ್ತೊರ್ವನಿಗೂ ಗಂಭೀರ ಗಾಯವಾಗಿದ್ದು, ಸಾರಿಗೆ ಬಸ್ ನ ಹಲವರಿಗೆ ಸಣ್ಣಪುಟ್ಟ ಗಾಯಾಗಳಾಗಿವೆ.
ಮೈಸೂರಿನ ಕನಕದಾಸನಗರ ನಿವಾಸಿ ಕಾರು ಚಾಲಕ ಸುನೀಲ್(34) ಸಾವನ್ನಪ್ಪಿರುವುದು ಎಂದು ಗುರುತಿಸಲಾಗಿದೆ.
ಮೈಸೂರಿನಿಂದ ಹಾಸನದ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಅದೇ ಮಾರ್ಗವಾಗಿ ಚಿಕ್ಕಮಗಳೂರುನಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.
ಇದನ್ನೂ ಓದಿ:- ಕೊಳ್ಳೇಗಾಲ| ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು
ಅಪಘಾತದ ರಭಸಕ್ಕೆ ಸಾರಿಗೆ ಬಸ್ ಕಾರಿನ ಮೇಲೆಯೆ ಹತ್ತಿದೆ. ಕಾರಿನಲ್ಲಿದ್ದ ಉಳಿದವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





