ಮೈಸೂರು

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು 

ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ, ಸೂರು ಇಲ್ಲದವರಿಗೆ ಸೂರು‌ ನೀಡಿ ಜನರ ಮನದಲ್ಲಿ ಅಚ್ಚಳಿಯದೇ ಉಳಿದಿರುವ ಮಾಜಿ ಸಚಿವರಾದ ಸಾ.ರಾ‌.ಮಹೇಶ್ ಅಣ್ಣ ಅವರ ಹಾದಿಯಲ್ಲಿ ಪುತ್ರ ಉದ್ಯಮಿ ಸಾ.ರಾ.ಜಯಂತ್ ಅವರು ಕೂಡ ಬಡವರು, ಬೀದಿಬದಿ ವ್ಯಾಪಾರಿಗಳಿಗೆ ಬೆನ್ನೆಲುಬಾಗಿದ್ದಾರೆ ಎಂದು ಪುರಸಭೆ ಮಾಜಿ ಸದಸ್ಯ ಕೆ.ಉಮೇಶ್ ಹೇಳಿದರು.

ಇಂದು ಪಟ್ಟಣದ ಗರುಡಗಂಭ ವೃತ್ತದಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಉದ್ಯಮಿ ಸಾ.ರಾ.ಜಯಂತ್ ಅವರ ಹುಟ್ಟು ಹಬ್ಬದ ಅಂಗವಾಗಿ ಸಾ.ರಾ.ಜಯಂತ್ ಸ್ನೇಹ ಬಳಗದಿಂದ ಹಮ್ಮಿಕೊಂಡಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ಮತ್ತು 150 ಮಂದಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಸ್ವಾರ್ಥ ಸೇವೆಯೇ ಮನುಷ್ಯನಿಗೆ ನಿಜವಾದ ಆತ್ಮತೃಪ್ತಿ. ಸೇವೆ ಮಾಡಬೇಕಾದರೆ ಯಾವುದೇ ರೀತಿಯಾದಂತಹ ಮುಜುಗರವಿರಬಾರದು. ಮನ ಸಾರೆ ಮಾಡಿದಾಗ ಸಂತೋಷದೊಂದಿಗೆ ನೆಮ್ಮದಿ ಉಂಟಾಗುತ್ತದೆ ಈ ಹಾದಿಯಲ್ಲಿ ಸಾಗುತ್ತಿರುವ ನಮ್ಮ ನಾಯಕರಾದ ಮಾಜಿ ಸಚಿವ ಸಾ.ರಾ.ಮಹೇಶ್ ಅಣ್ಣನವರನ್ನು ಪಡೆದಿರುವ ನಾವುಗಳೇ ಧನ್ಯ ಎಂದು ನುಡಿದರು.

ಸಾ.ರಾ.ಮಹೇಶ್ ಅಣ್ಣನವರ ಮಕ್ಕಳು ಕೂಡ ತಂದೆಯಂತೆ ಬಡವರ, ನೊಂದವರ, ರೈತರ ಸಂಕಷ್ಟಕ್ಕೆ ಸದಾ ಮೀಡಿಯುತ್ತಿದ್ದಾರೆ. ವೈದ್ಯರಾಗಿ ಡಾ.ಸಾ.ರಾ.ಧನುಷ್ ರೋಗಿಗಳ ಮನೆ ಬಾಗಿಲಿಗೆ ಹೋಗಿ ಉಚಿತ ಚಿಕಿತ್ಸೆ ನೀಡಿ ಜೊತೆಗೆ ನೆರವು ಕೂಡ ನೀಡಿ ಜನಪ್ರಿಯತೆ ಪಡೆದು ಜನರ ಮನಸ್ಸಿನಲ್ಲಿದ್ದಾರೆ ಎಂದು ಕೊಂಡಾಡಿದರು.

ಇನ್ನೂ ಉದ್ಯಮಿಯಾಗಿರುವ ಸಾ.ರಾ.ಜಯಂತ್ ಕೂಡ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕಿನ ಜನರ ಸಂಕಷ್ಟಕ್ಕೆ ನೆರವಾಗಿದ್ದಾರೆ, ಇಂದು ಸಾ.ರಾ.ಜಯಂತ್ ಹುಟ್ಟು ಹಬ್ಬ ಆದರೆ ಅವರು ಸಮಾಜ ಮುಖಿಯಾಗಿ ತನ್ನ ಹುಟ್ಟು ಹಬ್ಬವನ್ನು ಆಚರಿಸಿ ಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ನಾವೆಲ್ಲ ನೋಡುತ್ತಿದ್ದೇವೆ ಎಂತಹ ಘಟಾನುಘಟಿಗಳು ಅವರ ಮಕ್ಕಳು ರೆಸಾರ್ಟ್, ಫೈವ್ ಸ್ಟಾರ್ ಹೋಟೆಲ್ ಹಾಗೂ ವಿದೇಶಕ್ಕೆ ಹೋಗಿ ತಮ್ಮ ಹುಟ್ಟು ಹಬ್ಬವನ್ನು ಸಂಬ್ರಮದಿಂದ ಆಚರಿಸಿ ಕೊಳಗಳ್ಳುತ್ತಾರೆ ಆದರೆ ಸಾ.ರಾ.ಮಹೇಶ್ ಅಣ್ಣ ಸೇರಿದಂತೆ ಅವರ ಮಕ್ಕಳು‌ ಕೂಡ ಜನರ ಮದ್ಯೆ ಹುಟ್ಟು ಹಬ್ಬವನ್ನು ಆಚರಣೆ ಮಾಡಿ ಕೊಂಡು ಬರುತ್ತಿದ್ದಾರೆ ಇದಲ್ಲವೇ ಜನಪ್ರಿಯತೆ ಎಂದು ತಿಳಿಸಿದರು.

ಕೆ.ಆರ್.ನಗರ ಪಟ್ಟಣದಲ್ಲಿ ಉದ್ಯಮಿ ಸಾ.ರಾ.ಜಯಂತ್ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಸಾ.ರಾ.ಜಯಂತ್ ಸ್ನೇಹ ಬಳಗದಿಂದ ನಗರ ಯುವ ಜೆಡಿಎಸ್ ಅಧ್ಯಕ್ಷ ವಿಕಾಸ್(ವಿಕ್ಕಿ) ನೇತೃತ್ವದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

2 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

2 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

2 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

3 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

3 hours ago