Mysore
23
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಹೈಕಮಾಂಡ್‌ದು: ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್‌ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ನವೆಂಬರ್‌ 13 ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಯಾರೇ ಆಗಿರಲಿ ಅವರನ್ನು ಗೆಲ್ಲಿಸಿಕೊಂಡು ಬರುವ ಸಲುವಾಗಿ ನಾವೆಲ್ಲರೂ ಹೋಗಿ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಅಧ್ಯಕ್ಷ ರಾಜೀನಾಮೆ ನೀಡುವ ಬಗ್ಗೆ ನನಗೆ ಇನ್ನೂ ಮಾಹಿತಿ ದೊರೆತಿಲ್ಲ. ಆದರೆ, ಸರ್ಕಾರ ಈಗಾಗಲೇ ಮುಡಾದಲ್ಲಿ ನಡೆದಿರುವ ಅವ್ಯವಹಾರ ಹಾಗೂ ಅವ್ಯವಸ್ಥೆಯನ್ನು ಸ್ವಚ್ಛ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಹೀಗಾಗಿ ಕೆಂಪಣ್ಣ ಆಯೋಗ ರಚಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಮುಡಾದಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮವಹಿಸಲಾಗುವುದು ಎಂದರು.

Tags:
error: Content is protected !!