ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ನವೆಂಬರ್ 13 ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಯಾರೇ ಆಗಿರಲಿ ಅವರನ್ನು ಗೆಲ್ಲಿಸಿಕೊಂಡು ಬರುವ ಸಲುವಾಗಿ ನಾವೆಲ್ಲರೂ ಹೋಗಿ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಅಧ್ಯಕ್ಷ ರಾಜೀನಾಮೆ ನೀಡುವ ಬಗ್ಗೆ ನನಗೆ ಇನ್ನೂ ಮಾಹಿತಿ ದೊರೆತಿಲ್ಲ. ಆದರೆ, ಸರ್ಕಾರ ಈಗಾಗಲೇ ಮುಡಾದಲ್ಲಿ ನಡೆದಿರುವ ಅವ್ಯವಹಾರ ಹಾಗೂ ಅವ್ಯವಸ್ಥೆಯನ್ನು ಸ್ವಚ್ಛ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಹೀಗಾಗಿ ಕೆಂಪಣ್ಣ ಆಯೋಗ ರಚಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಮುಡಾದಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮವಹಿಸಲಾಗುವುದು ಎಂದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…