ಮೈಸೂರು

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತ ನಡೆಸಿದ ಕಾರು ಪರಾರಿಯಾಗಿದ್ದು, ಘಟನೆಯ ನಂತರ ಪೊಲೀಸರು ಇನ್ನೂ ಕಾರನ್ನು ಪತ್ತೆ ಹಚ್ಚದಿರುವುದಕ್ಕೆ ಸ್ಥಳೀಯರು ಆಕ್ರೋಶಗೊಂಡಿದ್ದರು.

ಸೋಮವಾರ ಸಂಜೆ ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಜಮಾಯಿಸಿದ ನೂರಾರು ಸ್ಥಳೀಯರು, “ಅಪಘಾತ ಮಾಡಿದ ಕಾರನ್ನು ತಕ್ಷಣ ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿ” ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಮೈಸೂರು-ಮಡಿಕೇರಿ ಹೆದ್ದಾರಿಯನ್ನು ಸುಮಾರು ಅರ್ಧ ಗಂಟೆ ಕಾಲ ತಡೆಹಿಡಿದಿದ್ದರಿಂದ ಎರಡು ದಿಕ್ಕಿನಲ್ಲೂ ವಾಹನಗಳು ಸಾಲುಗಟ್ಟಿ ನಿಂತು ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು.

ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದ ಪೊಲೀಸರು, ಸಿಸಿ ಕ್ಯಾಮೆರಾಗಳನ್ನು ತ್ವರಿತವಾಗಿ ಸರಿಪಡಿಸುವುದಾಗಿ ಮತ್ತು ಅಪಘಾತಕ್ಕೆ ಸಂಬಂಧಿಸಿದ ತನಿಖೆಯನ್ನು ತೀವ್ರಗೊಳಿಸುವ ಭರವಸೆ ನೀಡಿದರು. ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟು ರಸ್ತೆ ತೆರವುಗೊಳಿಸಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

11 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago