ಮೈಸೂರು: ಮಹಾಕುಂಭಮೇಳದಲ್ಲಿ ಉತ್ತರ ಪ್ರದೇಶದ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಆದರೆ ನಿರೀಕ್ಷೆಗೂ ಮೀರಿದ ಸಾರ್ವಜನಿಕರು ಆಗಮಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ದಿನಗಳ ಕಾಲ ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದೆ. ಆ ವೇಳೆ ನೋಡಿದಾಗ ಅಲ್ಲಿ ಯಾವುದೇ ಯಾವುದೇ ರೀತಿಯ ಸಮಸ್ಯೆಗಳು ಕಂಡು ಬರಲಿಲ್ಲ. ಅಲ್ಲಿನ ಸರ್ಕಾರ ಮಹಾಕುಂಭಮೇಳಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕ್ರಮವಹಿಸಿತ್ತು ಎಂದರು.
ಇನ್ನೂ ಮಹಾಕುಂಭಮೇಳಕ್ಕೆ ಮೌನಿ ಅಮಾವಾಸ್ಯೆ ಪ್ರಯುಕ್ತ ಅಲ್ಲಿನ ಸರ್ಕಾರ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಂಡಿತ್ತು. ಆದರೆ ಅನಿರೀಕ್ಷಿತ ಸಾರ್ವಜನಿಕರು ಆಗಮಿಸಿರುವುದರಿಂದ ಈ ಘಟನೆ ಸಂಭವಿಸಿರಬಹುದು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಹೇಳಿದರು.