Mysore
22
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ.

ಜಮೀನಿನಲ್ಲಿ ಮೇವು ಮೇಯುತ್ತಿದ್ದ ಕರುವಿನ ಮೇಲೆ ಹುಲಿಯೊಂದು ದಾಳಿ ನಡೆದಿ ಕೊಂದು ಹಾಕಿದೆ. ರೈತ ಶಿವಲಿಂಗು ಎಂಬುವವರಿಗೆ ಸೇರಿದ ಗಿರ್‌ ತಳಿಯ ಕರು ಇದಾಗಿದೆ.

ಹುಲಿ ದಾಳಿಯಿಂದ ಈ ಭಾಗದ ರೈತರು ಕಂಗಾಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

 

Tags:
error: Content is protected !!