ಮೈಸೂರು

ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2023 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.

ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2023 ರ ಜನವರಿ 01 ರಿಂದ 2023 ರ ಡಿಸೆಂಬರ್ 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿದ್ದು, ಕೃತಿಯಲ್ಲಿ ಪ್ರಥಮ ಮುದ್ರಣ 2023 ಎಂದು ಮುದ್ರಿತವಾಗಿರಬೇಕು. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು.

ಕಾವ್ಯ, ನವ ಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತ ಪ್ರತಿ, ಕಾದಂಬರಿ, ಸಣ್ಣ ಕಥೆ, ನಾಟಕ, ಲಲಿತ ಪ್ರಬಂಧ, ಜೀವನ ಚರಿತ್ರೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ / ಅಂಕಣ ಬರಹ, ಅನುವಾದ -1, ಅನುವಾದ-2, ಲೇಖಕರ ಮೊದಲ ಸ್ವಾತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷ್‌ಗೆ ಅನುವಾದ, ದಾಸ ಸಾಹಿತ್ಯ, ಸಂಕೀರ್ಣ ಪ್ರಕಾರಗಳನ್ನು ಹೊಂದಿರುವ ಪುಸ್ತಕಗಳನ್ನು ಸಲ್ಲಿಸಬಹುದಾಗಿದೆ.

ಬೆಂಗಳೂರಿನ ಜೆ.ಸಿ ರಸ್ತೆಯ ಎರಡನೇ ಮಹಡಿಯಲ್ಲಿರುವ ಕನ್ನಡ ಭವನದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರ ವಿಳಾಸಕ್ಕೆ ಪ್ರಕಟವಾದ ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಆಗಸ್ಟ್ 31 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-22211730 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

3 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

4 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

5 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

10 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

17 hours ago