ಮೈಸೂರು

ಹುಲಿ ಗಣತಿಗಾಗಿ ಕ್ಯಾಮೆರ ಕೊಡುಗೆ

ಹುಣಸೂರು : ಅಖಿಲ ಭಾರತ ಹುಲಿ ಗಣತಿಗಾಗಿ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿಯ ನವೋದಯ ಫೌಂಡೇಷನ್‌ವತಿಯಿಂದ ೨೦೦ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಸಿಇಒ ಟೈಗರ್ ರಮೇಶ್ ಅವರು ನಾಗರಹೊಳೆ ಉದ್ಯಾನದ ಹುಣಸೂರು ವಿಭಾಗ ಕಚೇರಿಗೆ ಕೊಡುಗೆಯಾಗಿ ನೀಡಿದರು.

ಹುಣಸೂರು ಹುಲಿ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಉದ್ಯಮಿಯಿಂದ ಕ್ಯಾಮೆರಾ ಸ್ವೀಕರಿಸಿ ಮಾತನಾಡಿದ ಡಿಸಿಎಫ್ ಸೀಮಾ ಅವರು, ಪರಿಸರ ಸಂರಕ್ಷಣೆ ಕಾಳಜಿ ಹೊಂದಿರುವ ಮ್ಯಾಗ್ನಾ ಸಾಫ್ಟ್‌ವೇರ್ ಕಂಪೆನಿ ನಿರಂತರವಾಗಿ ನಾಗರಹೊಳೆ ಅರಣ್ಯ ಸಂರಕ್ಷಣೆಗೆ ಸಿಎಸ್‌ಆರ್ ಅನುದಾನದಿಂದ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಇವರ ಪರಿಸರ ಕಾಳಜಿಗೆ ಇಲಾಖೆ ಕೃತಜ್ಞತೆ ಸಲ್ಲಿಸುತ್ತದೆ ಎಂದರು.

ಅರಣ್ಯದಲ್ಲಿ ಹುಲಿ ಚಲನವಲನ ವೀಕ್ಷಣೆಗೆ ಕ್ಯಾಮೆರಾ ಟ್ರ್ಯಾಪಿಂಗ್ ತಂತ್ರಜ್ಞಾನ ಅಳವಡಿಸಿಕೊಂಡಿದ್ದು, ಈಗಾಗಲೇ ೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಅಳವಡಿಸಿ ನಿಗಾವಹಿಸಿದೆ. ಉದ್ಯಮಿ ನೀಡಿದ ಕ್ಯಾಮೆರಾವನ್ನು ಹುಲಿ ಯೋಜನೆಗೆ ಬಳಸಿಕೊಂಡು ಅರಣ್ಯದಂಚಿನ ಗ್ರಾಮಗಳಲ್ಲಿ ಜನ-ಜಾನುವಾರುಗಳ ಸುರಕ್ಷತೆಗೆ ಸಹಕಾರವಾಗಲಿದೆ ಎಂದರು.

ಬೇಸಿಗೆಯಲ್ಲಿ ಅರಣ್ಯದಲ್ಲಿ ಕೊಳವೆ ಬಾವಿಯಿಂದ ಕೆರೆಗಳಿಗೆ ನೀರು ಹರಿಸಲು ಈ ಹಿಂದೆ ಡಿಸಿಎಫ್ ದಿ.ಮಣಿಕಂದನ್ ಸೋಲಾರ್ ಪಂಪ್‌ಸೆಟ್ ಅಳವಡಿಸಿ ಕೆರೆಗೆ ನೀರು ಸೇರಿಸುವ ಪ್ರಯತ್ನ ಯಶಸ್ವಿಯಾಗಿ ಅರಣ್ಯದಲ್ಲಿ ಹಲವು ಸ್ಥಳದಲ್ಲಿ ಕಾರ್ಯನಿರ್ವಹಿಸಿದೆ. ಅದೇ ಮಾದರಿಯಲ್ಲಿ ಉದ್ಯಮಿ ಟೈಗರ್ ರಮೇಶ್ ಸೋಲಾರ್ ಪಂಪ್‌ಸೆಟ್ ನೀಡಿದ್ದಾರೆ ಎಂದರು.

ಕ್ಯಾಮೆರಾ ಹಸ್ತಾಂತರ ಸಮಯದಲ್ಲಿ ಕಂಪೆನಿಯ ಗೋವಿಂದನ್ ತಿರುಮಲೈ, ಪರಮೇಶ್ ಮೂರ್ತಿ, ಕೊಯಮತ್ತೂರಿನ ಹರಿಸಾಂತರಾಮ್, ಅಂತರಸಂತೆ ವಲಯದ ವಲಯ ಅರಣ್ಯಾಧಿಕಾರಿ ಸಿದ್ದರಾಜು, ಪಶುವೈದ್ಯಾಧಿಕಾರಿ ಡಾ.ರಮೇಶ್, ಕಚೇರಿ ವ್ಯವಸ್ಥಾಪಕ ರಘು, ಮಂಜು, ಗೋಪಿ, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

15 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

16 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

18 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

21 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

21 hours ago