ಮೈಸೂರು

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧದ ಅವಹೇಳನಕಾರಿ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಹರಿದಾಡುತ್ತಿರುವ ವಿಡಿಯೋ ಸುಳ್ಳಾಗಿದ್ದು, ತಂದೆಯವರ ವಿರುದ್ಧ ಅಪಪ್ರಚಾರ ಮತ್ತು ತೇಜೋವಧೆ ಮಾಡುವ ಷಡ್ಯಂತ್ರ ನಡೆಯುತ್ತಿದೆ ಎಂದು ಯತೀಂದ್ರ ಆರೋಪಿಸಿದ್ದಾರೆ.

“ಸುಳ್ಳು ವಿಡಿಯೋ ಎಲ್ಲೆಡೆ ಹರಡಿದಾಗ, ಅದನ್ನು ನೋಡುವ ಜನರು ನಿಜವೆಂದು ನಂಬುವ ಸಾಧ್ಯತೆ ಇದೆ. ಹೀಗಾಗಿ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ವಿಡಿಯೋ ಪ್ರಕಟಿಸಿದವರು ಹಾಗೂ ಸುಳ್ಳು ಮಾಹಿತಿ ಹರಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ತಂದೆಯವರ ನಿಲುವು” ಎಂದು ಹೇಳಿದ್ದಾರೆ.

ವಿಡಿಯೋ ಗಮನಕ್ಕೆ ಬಂದ ಸಂದರ್ಭದಲ್ಲೇ ಸಿದ್ದರಾಮಯ್ಯ ಅವರು ಕುಟುಂಬದವರೊಂದಿಗೆ ಚರ್ಚಿಸಿದ್ದರು. ದೂರು ನೀಡುವುದಾಗಿ ತಿಳಿಸಿದ್ದ ಅವರು, ಕಾನೂನು ಸಲಹೆಗಾರರ ಸಲಹೆ ಪಡೆದು ದೂರು ಸಲ್ಲಿಸಿದ್ದಾರೆ. ಜೊತೆಗೆ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಯತೀಂದ್ರ ವಿವರಿಸಿದ್ದಾರೆ.

“ತಡೆಯಾಜ್ಞೆ ಕೋರುವುದಷ್ಟೇ ಅಲ್ಲ, ಸುಳ್ಳು ವಿಡಿಯೋ ಹರಿಬಿಡುತ್ತಿರುವವರ ವಿರುದ್ಧ ಪ್ರಕರಣವನ್ನೂ ದಾಖಲಿಸುತ್ತೇವೆ. ಇಂದಿನ ರಾಜಕೀಯ ಪರಿಸ್ಥಿತಿ ಕೆಳಮಟ್ಟಕ್ಕೆ ಇಳಿದಿದೆ. ಸ್ಟಿಂಗ್ ಆಪರೇಷನ್ ಎಂಬ ಹೆಸರಿನಲ್ಲಿ ಆರೋಪ ಮಾಡಿಸಲಾಗುತ್ತಿದೆ. ಸಿದ್ದರಾಮಯ್ಯ ಅವರಂತಹ ದೊಡ್ಡ ನಾಯಕರೂ ಇಂತಹ ಆರೋಪಗಳನ್ನು ಎದುರಿಸಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಚಾರದಿಂದ ಕುಟುಂಬಕ್ಕೆ ಬೇಸರವಾಗಿಲ್ಲ ಎಂದಿರುವ ಯತೀಂದ್ರ, “ತಪ್ಪು ಮಾಡಿದ್ದರೆ ಬೇಸರವಾಗುತ್ತಿತ್ತು. ರಾಜಕೀಯಕ್ಕೆ ಬಂದ ಮೇಲೆ ಇಂತಹ ಸಂದರ್ಭಗಳನ್ನು ಎದುರಿಸಬೇಕಾಗುತ್ತದೆ. ನಾವು ಇದನ್ನು ಎದುರಿಸುತ್ತೇವೆ” ಎಂದು ಹೇಳಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಅವರ ಮೈಸೂರು ಭೇಟಿಯ ಕುರಿತು ಮಾತನಾಡಿದ ಅವರು, “ನಾನು ಮತ್ತು ತಾಯಿ ಮೈಸೂರಿನಲ್ಲಿರುವುದರಿಂದ ತಂದೆಯವರು ಬಂದಿದ್ದಾರೆ. ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆಯೇ ಎಂಬುದು ನನಗೆ ತಿಳಿದಿಲ್ಲ” ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

3 mins ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

23 mins ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

49 mins ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

4 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

4 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

4 hours ago