ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್ ಕುಮಾರ್, ಶ್ರೇಯಸ್ ಹಾಗೂ ಶಿವಪುರದ ಪ್ರವೀಣ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರೆಲ್ಲಾ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೈಬರ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 6.30 ಲಕ್ಷ ಮೌಲ್ಯದ 21 ಕೆಜಿ ಗಾಂಜಾ, ಕಾರು ಹಾಗೂ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಮೂವರು ಬಂಧಿತರನ್ನು ವಿಚಾರಣೆ ನಡೆಸಿದ ಬಳಿಕ ಆರೋಪಿಗಳು ಒಡಿಶಾದಿಂದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.
ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಬಳಿಕವೇ ಇನ್ನೂ ಹೆಚ್ಚಿನ ಸತ್ಯಾಸತ್ಯತೆ ಹೊರಬರಲಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…