ಮೈಸೂರು

ಕಾರು ಡಿಕ್ಕಿ : ಸ್ಕೂಟರ್‌ ಸವಾರ ಸಾವು

ಸಾಲಿಗ್ರಾಮ : ಕಾರು ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮೂಡಲಬೀಡು ಗೇಟ್ ಬಳಿ ಭಾನುವಾರ ನಡೆದಿದೆ.

ಪಟ್ಟಣದ ರಾಂಪುರ ಬಡಾವಣೆಯ ಸಣ್ಣನಿಂಗನಾಯಕ (೫೦) ಮೃತಪಟ್ಟವರು.

ತಾಲ್ಲೂಕಿನ ಭೇರ್ಯ ಕಡೆಯಿಂದ ಸಾಲಿಗ್ರಾಮದ ಕಡೆಗೆ ಬರುತ್ತಿದ್ದ ಕಾರೊಂದು ಮೂಡಲಬೀಡು ಗೇಟಿನಲ್ಲಿ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಸಣ್ಣನಿಂಗನಾಯಕ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಸಣ್ಣನಿಂಗನಾಯಕ ಅವರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನು ಓದಿ: ಟಿಪ್ಪರ್‌-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

ಈ ಸಂದರ್ಭದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರು ಆಸ್ಪತ್ರೆಗೆ ಧಾವಿಸಿ ಮೃತರ ಅಂತಿಮ ದರ್ಶನವನ್ನು ಪಡೆದು ಕಂಬನಿ ಮಿಡಿದರು.

ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಯಿತು. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರ ಅಂತ್ಯಕ್ರಿಯೆ ಪಟ್ಟಣದ ರಾಂಪುರ ಬಡಾವಣೆಯಲ್ಲಿ ಭಾನುವಾರ ನಡೆಯಿತು. ಮೃತರು ಪತ್ನಿ ಶಕುಂತಲ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

4 mins ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

14 mins ago

ಫೆ.1ರಂದು ನಿಮಿಷಾಂಬದಲ್ಲಿ ಮಾಘ ಶುದ್ಧ ಪೌರ್ಣಮಿ : ನದಿಯ ತೀರದಲ್ಲಿ ಸೂಕ್ತ ಭದ್ರತೆಗೆ ಶಾಸಕರ ಸೂಚನೆ

ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…

23 mins ago

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

1 hour ago

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…

2 hours ago

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

2 hours ago