accident case Two dead
ಹೊಸೂರು: ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ಚುಂಚನಕಟ್ಟೆ ಮುಖ್ಯರಸ್ತೆಯಲ್ಲಿ ನಡೆದಿದೆ.
ಹಾಸನದ ಲಕ್ಷ್ಮೀಪುರಂ ಬಡಾವಣೆಯ ಕಲೀಮ್ ರೆಹಮಾನ್ (೬೫) ಮತ್ತು ಶೇಕ್ ಅಬ್ದುಲ್ ಖಾದರ್ (೪೫) ಸ್ಥಳದಲ್ಲಿಯೇ ಮೃತಪಟ್ಟವರು.
ಹಾಸನ ಕಡೆಯಿಂದ ಚುಂಚನಕಟ್ಟೆಗೆ ತೆರಳುವ ರಸ್ತೆಯಲ್ಲಿ ಪೈಪ್‌ಲೈನ್‌ಗಾಗಿ ಗುಂಡಿ ತೆಗೆಯಲಾಗಿದ್ದು ಅದನ್ನು ಸೂಕ್ತವಾಗಿ ಮುಚ್ಚದ ಕಾರಣ ಆ ಗುಂಡಿಯಲ್ಲಿ ಇಳಿದ ಕಾರು (ಕೆಎ೧೩ ಪಿ ೦೭೬೦) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಶೇಕ್ ಮುನೀರ್ ಅಹ್ಮದ್ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಾಲಿಗ್ರಾಮ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿ, ರಸ್ತೆಯಲ್ಲಿ ಗುಂಡಿ ತೆಗೆದು ಅಪಘಾತವಾಗಲು ಕಾರಣವಾದವರ ಮೇಲೆ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…