ಮೈಸೂರು

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ವಂಚಕರ ತಂಡವನ್ನು ಮೈಸೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ನಗರದ ಗೌಸಿಯಾನಗರ ನಿವಾಸಿ ಹಾಗೂ ಹಣ್ಣಿನ ವ್ಯಾಪಾರಿ ರುಮಾನ್ ಷರೀಪ್, ರಾಜೀವ್‌ನಗರ ನಿವಾಸಿ ಹಾಗೂ ಕಾರಿನ ಡೀಲರ್ ಮುಜಾಹಿದ್ ಪಾಷ ಹಾಗೂ ಲಷ್ಕರ್ ಮೊಹಲ್ಲಾ ನಿವಾಸಿ ಹಾಗೂ ಕಾರ್ ಮ್ಯಾಕಾನಿಕ್ ಷಾಹಬುದ್ದೀನ್ ಬಂಧಿತರು. ಬಂಧಿತರಿಂದ 1,10 ಕೋಟಿ ರೂ.ಮೌಲ್ಯದ 8 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ಮಲ್ಲಿಕಾರ್ಜುನ್‌ ಬಾಲದಂಡಿ ಮಾಹಿತಿ ನೀಡಿದ್ದಾರೆ.

ಆರೋಪಿಗಳು ಫೇಸ್‌ಬುಕ್ ಮೂಲಕ ಪರಿಚಯ ಮಾಡಿಕೊಂಡು, “ಕಡಿಮೆ ಬೆಲೆಗೆ ಉತ್ತಮ ಕಾರುಗಳು ದೊರೆಯುತ್ತವೆ” ಎಂದು ನಂಬಿಸುತ್ತಿದ್ದರು. ನಂತರ ಮುಜಾಹಿದ್ ಪಾಷಾ ಮತ್ತು ಷಾಹಬುದ್ದೀನ್ ಜೊತೆ ಸೇರಿ, ಖರೀದಿದಾರರಿಗೆ ಪೋಲೊ ಮತ್ತು ಆಡಿ ಕಂಪನಿಯ ಕಾರುಗಳನ್ನು ನೀಡಿ ಹಣ ಪಡೆಯುತ್ತಿದ್ದರು. ಆದರೆ ಕಾರಿಗೆ ಸಂಬಂಧಿಸಿದ ಆರ್‌ಸಿ, ಇನ್ಸೂರನ್ಸ್ ಅಥವಾ ಯಾವುದೇ ದಾಖಲೆಗಳನ್ನು ನೀಡುತ್ತಿರಲಿಲ್ಲ.

ಪ್ರಕರಣವೊಂದರಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾದ ಬಳಿಕ, ತನಿಖೆ ಆರಂಭಿಸಿದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ಬೆಂಗಳೂರು ಮತ್ತು ಅನ್ಯ ರಾಜ್ಯಗಳಿಂದ ಕಾರುಗಳನ್ನು ತಂದು ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಈ ಜಾಲದಲ್ಲಿ ಹಲವು ಮಂದಿ ವಂಚನೆಗೆ ಒಳಗಾಗಿದ್ದಾರೆ ಪೊಲೀಸರು ಶಂಕಿಸಿದ್ದಾರೆ.

ಅಪರ ಪೊಲೀಸ್ ಅಧಿಕ್ಷಕ ಎಲ್.ನಾಗೇಶ್ ನೇತೃತ್ವದಲ್ಲಿ ಡಿಎಸ್‌ಪಿ ಜಿ.ಎಸ್.ರಘು, ಬನ್ನೂರು ಪೊಲೀಸ್ ಠಾಣೆಯ ಪಿಐ.ಸತೀಶ್, ಪಿಎಸ್‌ಐ.ಸುದರ್ಶನ್, ಎಎಸ್‌ಐ.ಸತೀಶ್ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

5 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

5 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

5 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

5 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

5 hours ago